ಕುದುರೆ ರೇಸ್ ಆನ್ ಲೈನ್ ಬೆಟ್ಟಿಂಗ್ ಗೆ ಅನುಮತಿ ಹೇಗೆ ಕೊಟ್ರಿ? ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ 

ಕುದುರೆ ರೇಸ್ ಗೆ ಆನ್ ಲೈನ್ ಬೆಟ್ಟಿಂಗ್ ಗೆ ಅನುಮತಿ ಹೇಗೆ ಕೊಟ್ರಿ?" ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನಿಸಿದೆ. 
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಕುದುರೆ ರೇಸ್ ಗೆ ಆನ್ ಲೈನ್ ಬೆಟ್ಟಿಂಗ್ ಗೆ ಅನುಮತಿ ಹೇಗೆ ಕೊಟ್ರಿ?" ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನಿಸಿದೆ. 

ಕಾನೂನಲ್ಲಿ ಅವಕಾಶ ಇಲ್ಲದೇ ಇದ್ದರೂ ಸಹ ಬೆಂಗಳೂರು ಟರ್ಫ್ ಕ್ಲಬ್ ಗೆ ಸರ್ಕಾರ ಆನ್ ಲೈನ್ ಬೆಟ್ಟಿಂಗ್ ನಡೆಸಲು ಅನುಮತಿ ನೀಡಿರುವುದನ್ನು ಅಸಂಬದ್ಧ ಎಂದು ಕೋರ್ಟ್ ಹೇಳಿದೆ.

ಡಿ.16 ರಿಂದ ಆನ್ ಲೈನ್ ಬೆಟ್ಟಿಂಗ್ ಗೆ ಅವಕಾಶ ನೀಡಲು ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದ್ದು, ಈ ಕುರಿತು ಸ್ಪಷ್ಟ ತೀರ್ಮಾನ ಕೈಗೊಳ್ಳುವಂತೆ ಮುಖ್ಯನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ಹಾಗೂ ನ್ಯಾ. ಎಸ್ ವಿಶ್ವಜಿತ್ ಶೆಟ್ಟಿ ಅವರಿದ್ದ  ಕೋರ್ಟ್ ನ ವಿಭಾಗೀಯ ಪೀಠ, ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಅಷ್ಟೇ ಅಲ್ಲದೇ ಸರ್ಕಾರಕ್ಕೆ ಆನ್ ಲೈನ್ ಬೆಟ್ಟಿಂಗ್ ಗೆ ಅನುಮತಿ ನೀಡಲು ಯಾವುದೇ ಅಧಿಕಾರವೂ ಇಲ್ಲ ಎಂದೂ ಕೋರ್ಟ್ ಹೇಳಿದೆ.

ಒಂದು ವೇಳೆ ಅನುಮತಿ ನೀಡಿದ್ದೇ ಆದಲ್ಲಿ ಕಾನೂನುಬಾಹಿರತೆಗೆ ಕಾನೂನುಬದ್ಧತೆಯನ್ನು ನೀಡಿದಂತಾಗಲಿದೆ ಎಂದು ಬೆಂಗಳೂರಿನ ಶಾಂತಿನಗರದ ನಿವಾಸಿ ಸಿ ಗೋಪಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಕೋರ್ಟ್ ಹೇಳಿದೆ.

ಇದೇ ವೇಳೆ ಬಿಟಿಸಿಯನ್ನೂ ಪ್ರಶ್ನಿಸಿರುವ ಕೋರ್ಟ್, ಕಾನೂನಿನಲ್ಲಿ ಅವಕಾಶವೇ ಇಲ್ಲದೇ ಅನುಮತಿಗೆ ಹೇಗೆ ಅರ್ಜಿ ಸಲ್ಲಿಸಿದ್ದೀರಿ? ಎಂದೂ ಕೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com