ಯಾರನ್ನೂ ವಿರೋಧಿಸಿ ಕನ್ನಡ ಬೆಳೆಸುವ ಅವಶ್ಯಕತೆ ಇಲ್ಲ: ತೇಜಸ್ವಿ ಸೂರ್ಯ

 ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ವಿರೋಧಿಸಿ ನಡೆದ ಬಂದ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಸದ ತೇಜಸ್ವಿ ಸೂರ್ಯ ಯಾರನ್ನೂ ವಿರೋಧ ಮಾಡಿ ಕನ್ನಡ ಬೆಳೆಸುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. 
ಸಂಸದ ತೇಜಸ್ವಿ ಸೂರ್ಯ
ಸಂಸದ ತೇಜಸ್ವಿ ಸೂರ್ಯ

ಬೆಳಗಾವಿ: ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ವಿರೋಧಿಸಿ ನಡೆದ ಬಂದ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಸದ ತೇಜಸ್ವಿ ಸೂರ್ಯ ಯಾರನ್ನೂ ವಿರೋಧ ಮಾಡಿ ಕನ್ನಡ ಬೆಳೆಸುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. 

ಬೆಳಗಾವಿಯಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ತೇಜಸ್ವಿ ಸೂರ್ಯ, "ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಸರಿಯಲ್ಲ. ಕರ್ನಾಟಕದಲ್ಲಿ ಕನ್ನಡ ಮಾತನಾಡುವ ಮರಾಠಿಗರಿದ್ದಾರೆ ಅಂತ ಬಹಳಷ್ಟು ಜನರಿಗೆ ಗೊತ್ತಿಲ್ಲ. ಕನ್ನಡಿಗರ ಅಭಿವೃದ್ಧಿ ಕರ್ನಾಟಕ ಸರ್ಕಾರದ ಜವಾಬ್ದಾರಿ.

ಈ ದೃಷ್ಟಿಯಿಂದ ಸಿಎಂ ಯಡಿಯೂರಪ್ಪ ಕರ್ನಾಟಕದಲ್ಲಿರುವ ಮರಾಠಿಗರಿಗಾಗಿ ಅಭಿವೃದ್ಧಿ ನಿಗಮ ಸ್ಥಾಪಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ, ಕನ್ನಡದ ಕೆಲಸಗಳಿಗೆ ಒಗ್ಗಟ್ಟಿನಿಂದ ಕೆಲಸ ಮಾಡೋಣ ಎಂದು ಕನ್ನಡ ಸಂಘಟನೆ ಮುಖಂಡರಿಗೆ ಕರೆ ನೀಡಿದ್ದು ಬಂದ್ ಸಂಸ್ಕೃತಿಯೇ ಬಂದ್ ಆಗಬೇಕು" ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com