ಕರ್ನಾಟಕ ಬಂದ್ ಬೆನ್ನಲ್ಲೇ 100 ಮಂದಿ ರೌಡಿ ಶೀಟರ್'ಗಳು ಪೊಲೀಸರ ವಶಕ್ಕೆ!
ಮರಾಠ ಸಮುದಾಯ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗದಲ್ಲಿದ್ದ 100ಕ್ಕೂ ಹೆಚ್ಚು ರೌಡಿ ಶೀಟಲ್'ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
Published: 05th December 2020 09:04 AM | Last Updated: 05th December 2020 12:57 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಮರಾಠ ಸಮುದಾಯ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗದಲ್ಲಿದ್ದ 100ಕ್ಕೂ ಹೆಚ್ಚು ರೌಡಿ ಶೀಟಲ್'ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ನಗರದ ಎಲ್ಲಾ ವಿಭಾಗದಲ್ಲೂ ಅಪರಾಧ ಹಿನ್ನೆಲೆಯುಳ್ಳ ರೌಡಿಶೀಟರ್'ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಶ್ಚಿಮ ವಿಭಾಗದಲ್ಲಿ ನೂರಕ್ಕೂ ಹೆಚ್ಚು ರೌಡಿಶೀಟರ್'ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೆಲವರನ್ನು ವಶಕ್ಕೆ ಪಡೆದಿರುವ ಹಿನ್ನೆಲೆಯಲ್ಲಿ ಕೆಲವರು ಬಂದ್, ಪ್ರತಿಭಟನೆ ಹಾಗೂ ಗಲಾಟೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟಿರುವ ಹಿನ್ನೆಲೆಯಲ್ಲಿ ಬಿಡುಗಡೆ ಮಾಡಿದ್ದಾರೆಂದು ವರದಿಗಳು ತಿಳಿಸಿವೆ.
ಇಂದು ಬೆಳಗ್ಗೆ 10:30ರಿಂದ ಟೌನ್‍ಹಾಲ್‍ನಿಂದ ಫ್ರೀಡಂ ಪಾರ್ಕ್‍ವರೆಗೂ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ರ್ಯಾಲಿ ನಡೆಸಲಿದ್ದಾರೆ. ಹೀಗಾಗಿ ಟೌನ್ ಹಾಲ್ ಬಳಿ ಪೊಲೀಸ್ ಭದ್ರತೆ ಹೆಚ್ಚು ಮಾಡಲಾಗಿದೆ.
ಒಬ್ಬರು ಇಬ್ಬರು ಎಸಿಪಿ, ಒಬ್ಬರು ಡಿಸಿಪಿ ನೇತೃತ್ವದಲ್ಲಿ 200 ಜನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಪ್ರತಿಭಟನೆ ನಿಯಂತ್ರಣಕ್ಕೆ ವಾಟರ್ ಜೆಟ್ ಕೂಡ ತರಲಾಗಿದೆ.
ಮೆಜೆಸ್ಟಿಕ್‍ನಿಂದ ವಿವಿಧ ಪ್ರದೇಶಗಳಿಗೆ ಕೆಎಸ್‍ಆರ್'ಸಿ, ಬಿಎಂಟಿಸಿ ಬಸ್ ಸಂಚಾರ ಎಂದಿನಂತೆ ಆರಂಭಗೊಂಡಿದೆ, ಆದರೆ, ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ಕೈಗೊಳ್ಳುವುದಾಗಿ ಸಾರಿಗೆ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.