ಕರ್ನಾಟಕ ಬಂದ್: ಬೆಂಗಳೂರಿನಲ್ಲಿ ಭಾಗಶಃ ಬೆಂಬಲ, ಕೆಲವೆಡೆ ಹೋರಾಟಗಾರರ ಬಂಧನ

ರಾಜ್ಯದಲ್ಲಿ ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಬೆಂಗಳೂರಿನಲ್ಲಿ ಭಾಗಶಃ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ ಕನ್ನಡ ಪರ ಸಂಘಟನೆಗಳ ಹೋರಾಟಗಾರರು
ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ ಕನ್ನಡ ಪರ ಸಂಘಟನೆಗಳ ಹೋರಾಟಗಾರರು

ಬೆಂಗಳೂರು: ರಾಜ್ಯದಲ್ಲಿ ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಬೆಂಗಳೂರಿನಲ್ಲಿ ಭಾಗಶಃ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಗರದಲ್ಲಿ ವ್ಯಾಪಾರ-ವಹಿವಾಟು ಎಂದಿನಂತೆ ನಡೆಯುತ್ತಿದ್ದು, ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಕನ್ನಡಪರ ಸಂಘಟನೆಗಳ ಕೆಲ ಕಾರ್ಯಕರ್ತರು ಮಾತ್ರ ತೀವ್ರ ಪ್ರತಿಭಟನೆ‌ ನಡೆಸುತ್ತಿದ್ದಾರೆ.

ಕೆಎಸ್‌ ಆರ್‌ ಟಿಸಿ, ಬಿಎಂಟಿಸಿ ಬಸ್ಸು ನಿಲ್ದಾಣ, ಮೆಟ್ರೊ ನಿಲ್ದಾಣಗಳ ಬಳಿ ಖಾಕಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಭದ್ರತೆ ಒದಗಿಸಿದೆ.

ಈಗಾಗಲೇ ಬಲವಂತವಾಗಿ ಬಂದ್ ಮಾಡಿಸುವಂತಿಲ್ಲ ಎಂದು ಪೊಲೀಸ್ ಇಲಾಖೆ ನೀಡಿದ ಸೂಚನೆಯ ಮೇರೆಗೆ ಗೌರ್ಮೆಂಟ್ಸ್ ಸಿಬ್ಬಂದಿ ಗಳು ಎಂದಿನಂತೆ ತಮ್ಮ ಕರ್ತವ್ಯ ಕ್ಕೆ ಹಾಜರಾಗಿದ್ದಾರೆ.

ಮೈಸೂರು ರಸ್ತೆ ಬಸ್ಸು ನಿಲ್ದಾಣ ಒಂದರ ಬಳಿಯೇ ಒಂದು ಕೆ ಎಸ್ ಆರ್ ಪಿ ತುಕಡಿ, 20ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

ಮರಾಠ ನಿಗಮ ರಚನೆ ವಿರೋಧಿಸಿ ನೂರಾರು ಕನ್ನಡ ಪರ ಸಂಘಟನೆಗಳ ಸದಸ್ಯರು ಟೌನ್ಹಾಲ್ ಬಳಿ ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ತಮ್ಮ ಆಕ್ರೋಶ ಹೊರಹಾಕಿದರು.

ಈ ವೇಳೆ, ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದು ಬಿಎಂಟಿಸಿ ಬಸ್ಸುಗಳಲ್ಲಿ ತುಂಬಿಸಿ ವಶಕ್ಕೆ ಪಡೆದರು. ಸದ್ಯ ವಶಕ್ಕೆ ಪಡೆದ ಪ್ರತಿಭಟನಕಾರರನ್ನು ಚಾಮರಾಜಪೇಟೆ ಸಿಎಆರ್ ಗ್ರೌಂಡ್ಗೆ ರವಾನಿಸಲಾಗಿದೆ ಎನ್ನಲಾಗಿದೆ.

ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಇಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಯಾವುದೇ ಅಹಿತಕರ ಘಟನೆ ನಡೆಸದಂತೆ ರೌಡಿಶೀಟರ್ಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಸಮಾಜ ಘಾತುಕ ಶಕ್ತಿಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಈಗಾಗಲೇ ಪ್ರತಿ ಪೊಲೀಸ್ ಠಾಣೆಯ ರೌಡಿಶೀಟರ್ಗಳನ್ನು ಕರೆಸಿ ಎಚ್ಚರಿಕೆ ನೀಡಲಾಗಿದೆ.‌ ಇನ್ನು, ಪೊಲೀಸರ ಸೂಚನೆಯ ಮೇರೆಗೆ ಕೆಲವರು ಠಾಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಪಶ್ಚಿಮ ವಿಭಾಗ ಪೊಲೀಸರು ಇಂದು 100ಕ್ಕೂ ಅಧಿಕ ರೌಡಿಶೀಟರ್ಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಬಿಜೆಪಿ ಕಚೇರಿಗೆ ಬಿಗಿ ಬಂದೋಬಸ್ತ್
ರಾಜ್ಯ ಸರ್ಕಾರ ಮರಾಠ ಅಭಿವೃದಿ ನಿಗಮ ಸ್ಥಾಪನೆ ಮಾಡಿರುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಬಂದ್ ನಡೆಸುತ್ತಿರುವುದರಿಂದ ರಾಜ್ಯ ಬಿಜೆಪಿ ಕಚೇರಿಗೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

ಮಲ್ಲೇಶ್ವರಂ ನಲ್ಲಿರುವ ರಾಜ್ಯ ಬಿಜೆಪಿ ಕಚೇರಿಗೆ ನಿಗದಿಗಿಂತ ಹೆಚ್ಚಿನ ಪೊಲೀಸ್ ರಕ್ಷಣೆ ಒದಗಿಸಲಾಗಿದೆ.

ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡ ಸಂಘಟನೆ ಕಾರ್ಯಕರ್ತರು ಬಿಜೆಪಿ ಕಚೇರಿಗೆ ನುಗ್ಗಬಹುದು ಎಂಬ ಕಾರಣಕ್ಕೆ ರಾಜ್ಯ ಬಿಜೆಪಿ ಕಚೇರಿಗೆ ದಿನ ನಿತ್ಯಕ್ಕಿಂತ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. 10 ಕ್ಕೂ ಹೆಚ್ಚು ಕಾನ್ಸ್ ಟೇಬಲ್, ಕೆ.ಎಸ್ ಆರ್ ಪಿ ವ್ಯಾನ್ ಕೂಡಾ ನಿಲ್ಲಿಸಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com