ಶೋಷಣೆ ಮುಕ್ತ ಸಮಾಜವನ್ನು ಕಟ್ಟಲು ಶ್ರಮಿಸೋಣ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

 ಮಹಾನ್ ಮಾನವತಾವಾದಿ ಡಾ. ಬಿ. ಆರ್. ಅಂಬೇಡ್ಕರ್ ಅವರು ಪ್ರತಿಪಾದಿಸಿರುವ ತತ್ವ ಆದರ್ಶಗಳನ್ನು ಅರ್ಥ ಮಾಡಿಕೊಂಡು ಅವರು ಹಾಕಿಕೊಟ್ಟ ಹಾದಿಯಲ್ಲಿ ಎಲ್ಲರೂ ನಡೆಯುವಂತೆ ಸಂಕಲ್ಪ ಮಾಡಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆ ನೀಡಿದ್ದಾರೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಬೆಂಗಳೂರು: ಮಹಾನ್ ಮಾನವತಾವಾದಿ ಡಾ. ಬಿ. ಆರ್. ಅಂಬೇಡ್ಕರ್ ಅವರು ಪ್ರತಿಪಾದಿಸಿರುವ ತತ್ವ ಆದರ್ಶಗಳನ್ನು ಅರ್ಥ ಮಾಡಿಕೊಂಡು ಅವರು ಹಾಕಿಕೊಟ್ಟ ಹಾದಿಯಲ್ಲಿ ಎಲ್ಲರೂ ನಡೆಯುವಂತೆ ಸಂಕಲ್ಪ ಮಾಡಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆ ನೀಡಿದ್ದಾರೆ.

ಸಂವಿಧಾನ ಶಿಲ್ಪಿ ಡಾ. ಬಿ. ಆರ್.ಅಂಬೇಡ್ಕರ್ ಅವರ ಮಹಾ  ಪರಿನಿರ್ವಾಣ ದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಸಮ ಸಮಾಜದ ನಿರ್ಮಾಣ ನಮ್ಮ ಸರ್ಕಾರದ ಗುರಿಯಾಗಿದ್ದು, ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸರ್ಕಾರದ ಸೌಲಭ್ಯಗಳು ತಲುಪಬೇಕು. ಈ ನಿಟ್ಟಿನಲ್ಲಿ ನಾವು ಅಗತ್ಯವಿರುವ ಯೋಜನೆಗಳನ್ನು ರೂಪಿಸಿ ಜಾರಿಗೆ ತರುತ್ತಿದ್ದೇವೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com