ಸುಮಾರು 250 ಕೋಟಿ ರೂ ವೆಚ್ಚದಲ್ಲಿ ಗ್ರಾಮ ಪಂಚಾಯತ್ ಚುನಾವಣೆ: ಆಯೋಗ ಸಿದ್ಧತೆ 

ಈ ತಿಂಗಳ 22 ಮತ್ತು 27ರಂದು ಎರಡು ಹಂತಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿದ್ದು, ಸುಮಾರು 250 ಕೋಟಿ ರೂಪಾಯಿ ಚುನಾವಣೆ ನಡೆಸಲು ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಈ ತಿಂಗಳ 22 ಮತ್ತು 27ರಂದು ಎರಡು ಹಂತಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿದ್ದು, ಸುಮಾರು 250 ಕೋಟಿ ರೂಪಾಯಿ ಚುನಾವಣೆ ನಡೆಸಲು ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ. 

ಕೋವಿಡ್-19 ಶಿಷ್ಟಾಚಾರದ ಮಧ್ಯೆ ಸುರಕ್ಷತೆ ಕಾಪಾಡಿಕೊಂಡು ಗ್ರಾಮ ಪಂಚಾಯತ್ ಚುನಾವಣೆಯನ್ನು ಚುನಾವಣಾ ಆಯೋಗ ನಡೆಸಬೇಕಾಗಿದೆ. 

ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸುಮಾರು 4 ಲಕ್ಷ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು ಸುಮಾರು 3 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಕೊರೋನಾ ಮಧ್ಯೆ ಇಷ್ಟು ದೊಡ್ಡ ಚುನಾವಣೆ ನಡೆಸುವುದು ನಿಜಕ್ಕೂ ಸವಾಲಾಗಿದೆ. 

ಮತಗಟ್ಟೆಗಳಲ್ಲಿ ಮತದಾರರಿಗೆ ಚುನಾವಣಾ ಆಯೋಗ ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ಮತ್ತು ಇತರ ಸುರಕ್ಷತಾ ಕ್ರಮಗಳನ್ನು ಒದಗಿಸಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com