ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ

ಧಾರವಾಡದಲ್ಲಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳವರೆಗೆ ವಿಸ್ತರಿಸಲಾಗಿದೆ.

Published: 07th December 2020 04:18 PM  |   Last Updated: 07th December 2020 04:18 PM   |  A+A-


Vinay Kulkarni talks to CBI officals in   Dharwad on Thursday

ವಿನಯ್ ಕುಲಕರ್ಣಿ

Posted By : Lingaraj Badiger
Source : Online Desk

ಧಾರವಾಡ: ಧಾರವಾಡದಲ್ಲಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳವರೆಗೆ ವಿಸ್ತರಿಸಲಾಗಿದೆ.

ಬೆಳಗಾವಿ ಜೈಲಿನಲ್ಲಿರುವ ವಿನಯ್ ಕುಲಕರ್ಣಿ ಅವರ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ಆರೋಪಿಯ ವಿಚಾರಣೆ ನಡೆಸಿದ ಧಾರವಾಡ 3ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲ
ಡಿಸೆಂಬರ್ 21ರ ವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶಿಸಿದೆ.

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಹಾಗೂ ತಮ್ಮ ಪ್ರಭಾವದಿಂದ ಪ್ರಕರಣ ಮುಚ್ಚಿ ಹಾಕಿರುವ ಆರೋಪದಲ್ಲಿ ನವೆಂಬರ್ 5ರಂದು ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಬಂಧಿಸಿತ್ತು.

ಧಾರವಾಡ ಜಿ.ಪಂ. ಸದಸ್ಯ ಹಾಗೂ ಸ್ಥಳೀಯ ಬಿಜೆಪಿ ನಾಯಕರಾಗಿದ್ದ ಯೋಗೇಶ್ ಗೌಡ ಅವರನ್ನು 2016, ಜೂನ್ 15ರಂದು ಸಪ್ತಾಪುರದಲ್ಲಿ ಹತ್ಯೆ ಮಾಡಲಾಗಿತ್ತು. ಅವರ ಜಿಮ್​ನ ಹೊರಗೆ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಎಸಗಿ ಕೊಲೆ ಮಾಡಲಾಗಿತ್ತು. ಬೈಕ್​ನಲ್ಲಿ ಬಂದಿದ್ದ ಸುಪಾರಿ ಹಂತಕರು ಈ ಕೃತ್ಯ ಎಸಗಿದ್ದರು.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp