ವಾಯುಭಾರ ಕುಸಿತ: ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಮುಂದಿನ 5 ದಿನ ಕಾಡಲಿದೆ ಮಳೆ ಕಾಟ.!!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಹಾಗೂ ಕೇರಳ, ತಮಿಳುನಾಡಿನಲ್ಲಿ ಕಾಣಿಸಕೊಂಡ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೆ 12 ರವರೆಗೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ರಾಮನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಡಿ. 12 ರವರೆಗೂ ಮಳೆಯಾಗಲಿದೆ ಎಂದೂ ಹವಾಮಾನ ಇಲಾಖೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com