ಹಿರಿಯ ನಾಗರಿಕರಿಗೆ ವೈದ್ಯಕೀಯ ವಿಮೆ ಯೋಜನೆ ರೂಪಿಸುವಂತೆ ರಾಜ್ಯ, ಕೇಂದ್ರ ಸರ್ಕಾರಗಳಿಗೆ ಹೈಕೋರ್ಟ್ ನಿರ್ದೇಶನ

ಹಿರಿಯ ನಾಗರಿಕರಿಗೆ ವೈದ್ಯಕೀಯ ವಿಮೆ ಯೋಜನೆ ರೂಪಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದೆ. 
ಹಿರಿಯ ನಾಗರಿಕರು (ಸಂಗ್ರಹ ಚಿತ್ರ)
ಹಿರಿಯ ನಾಗರಿಕರು (ಸಂಗ್ರಹ ಚಿತ್ರ)

ಹಿರಿಯ ನಾಗರಿಕರಿಗೆ ವೈದ್ಯಕೀಯ ವಿಮೆ ಯೋಜನೆ ರೂಪಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದೆ. 

ನಗರದ ಲೆಟ್ಸ್ಕಿಟ್ ಫೌಂಡೇಶನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿರುವ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ಹಾಗೂ ನ್ಯಾ. ಎಸ್ ವಿಶ್ವಜೀತ್ ಶೆಟ್ಟಿ ಅವರ ವಿಭಾಗೀಯ ಪೀಠ, "ಅರ್ಜಿದಾರರು ಮನವಿ ಮಾಡಿರುವಂತೆ ಹಿರಿಯ ನಾಗರಿಕರಿಗೆ ಕಡಿಮೆ ಹಾಗೂ ಕೈಗೆಟುಕುವ ದರದಲ್ಲಿ ವೈದ್ಯಕೀಯ ವಿಮೆ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಹೈಕೋರ್ಟ್ ಆದೇಶ ನೀಡುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ವಿಮೆ ಪಾಲಿಸಿಗಳು ವಾಣಿಜ್ಯ ದೃಷ್ಟಿಯೂ ಸೇರಿ ಹಲವಾರು ಅಂಶಗಳಿಂದ ಕೂಡಿರುತ್ತದೆ.

"ಹಿರಿಯ ನಾಗರಿಕರಿಗೆ ವೈದ್ಯಕೀಯ ವಿಮೆ ಜಾರಿಗೊಳಿಸುವಂತೆ ಆದೇಶ ನೀಡಲು ಸಾಧ್ಯವಾಗದೇ ಇರುವುದರಿಂದ, ಅವರಿಗಾಗಿಯೇ ವೈದ್ಯಕೀಯ ವಿಮೆ ಯೋಜನೆಯನ್ನು ರೂಪಿಸುವುದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಲಾಗುತ್ತಿದೆ. ಪ್ರಮುಖವಾಗಿ ಕೋವಿಡ್-19 ಸಂದರ್ಭದಲ್ಲಿ ವೈದ್ಯಕೀಯ ವಿಮೆ ಯೋಜನೆಯನ್ನು ರೂಪಿಸುವುದು ಅಗತ್ಯವಿದೆ" ಎಂದು ಹೈಕೋರ್ಟ್ ಹೇಳಿದ್ದು, ಸಂವಿಧಾನದ ಆರ್ಟಿಕಲ್ 21 ಅಡಿಯಲ್ಲಿ ಆರೋಗ್ಯದ ಹಕ್ಕೂ ಸಹ ಇದೆ ಎಂಬುದನ್ನು ಸುಪ್ರೀಂ ಕೋರ್ಟ್ ಹೇಳಿರುವುದನ್ನು ಉಲ್ಲೇಖಿಸಿದೆ.

ಈಗಾಗಲೇ ಹಿರಿಯ ನಾಗರಿಕರಿಗೆ ಇರುವ ವಿವಿಧ ವೈದ್ಯಕೀಯ ಯೋಜನೆಗಳ ಬಗ್ಗೆಯೂ ಜ.8 ರ ವೇಳೆಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಹೈಕೋರ್ಟ್ ಸರ್ಕಾರಗಳಿಗೆ ಸೂಚನೆ ನೀಡಿದ್ದು ಮುಂದಿನ ವಿಚಾರಣೆಯನ್ನು ಜ.11 ಕ್ಕೆ ಮುಂದೂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com