ಮೆಕ್ಕಜೋಳ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ಖರೀದಿಸಲು ಸಾಧ್ಯವಿಲ್ಲ: ಸಚಿವ ಮಾಧುಸ್ವಾಮಿ

ರಾಜ್ಯದಲ್ಲಿ ಬೆಳೆದಿರುವ ೪೧ ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರಕಾರ ನೀಡಿದ ...
ಜೆ. ಸಿ. ಮಾಧುಸ್ವಾಮಿ
ಜೆ. ಸಿ. ಮಾಧುಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಬೆಳೆದಿರುವ ೪೧ ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರಕಾರ ನೀಡಿದ ಉತ್ತರವನ್ನು ಪ್ರತಿಭಟಿಸಿ ಕಾಂಗ್ರೆಸ್ ಸದಸ್ಯರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭಾತ್ಯಾಗ ಮಾಡಿದರು.

ಮಂಗಳವಾರ ವಿಧಾನಸಭೆಯಲ್ಲಿ ನಿಯಮ ೬೯ರಡಿಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆ ಕುರಿತು ನಡೆದ ಚರ್ಚೆಗೆ ಸಂಬಂಧಿಸಿದಂತೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಉತ್ತರ ನೀಡಿದರು.

ಪಡಿತರ ವ್ಯವಸ್ಥೆಯಲ್ಲಿ ವಿತರಿಸಲು ಸಾಧ್ಯವಿದ್ದಲ್ಲಿ ಮೆಕ್ಕೆಜೋಳವನ್ನು ಖರೀದಿಸಿ ಹಂಚಿಕೆ ಮಾಡಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ. ಆದರೆ ನಮ್ಮ ರಾಜ್ಯದಲ್ಲಿ ಮೆಕ್ಕೆಜೋಳವನ್ನು ಪಶುಗಳ ಆಹಾರಕ್ಕೆ ಹೊರತುಪಡಿಸಿ, ಮಾನವ ಬಳಕೆಗೆ ಉಪ ಯೋಗಿಸುವುದಿಲ್ಲ. ಹೀಗಾಗಿ ಮೆಕ್ಕೆಜೋಳ ಖರೀದಿಸಲು ಸಾಧ್ಯವಿಲ್ಲ ಎಂದು ಮಾಧುಸ್ವಾಮಿ ಸ್ಪಷ್ಟಪಡಿಸಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ಸದಸ್ಯ ಎಚ್ ಕೆ ಪಾಟೀಲ್ ಅವರು, ಮೆಕ್ಕೆಜೋಳವನ್ನು ಮಾನವ ಬಳಕೆಗೆ ಉಪಯೋಗಿಸುವುದಿಲ್ಲ ಎಂದು ಸರಕಾರ ಹೇಳುತ್ತಿದೆ. ಆದರೆ ಮೆಕ್ಕೆಜೋಳದಿಂದ ಗ್ಲೂಕೋಸ್ ಸಿದ್ಧಪಡಿಸುತ್ತಾರೆ. ಕೈಗಾರಿಕೆಗಳ ಉದ್ದೇಶಕ್ಕೂ ಇದರ ಬಳಕೆಯಾಗುತ್ತಿದೆ. ಸರಕಾರ ಈ ರೀತಿ ಅಸಹಾಯಕವಾದ ಉತ್ತರ ನೀಡಿದರೆ ರೈತರ ಪರಿಸ್ಥಿತಿ ಏನಾಗಬೇಕು ಎಂದು ಪ್ರಶ್ನಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com