ಕನ್ನ ಕಳವು ಮಾಡುತ್ತಿದ್ದ ಆರೋಪಿ ಬಂಧನ: 55 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಕುಖ್ಯಾತ ಕನ್ನ ಕಳವು ಮಾಡುತ್ತಿದ್ದ ಆರೋಪಿಯನ್ನು  ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಅರ್ಧ ಕೆಜಿ ಚಿನ್ನಾಭರಣ ಮತ್ತು 31 ಕೆಜಿ ತೂಕದ ಬೆಳ್ಳಿಯ ಅಭರಣಗಳು ಸೇರಿದಂತೆ 55 ಲಕ್ಷ ರೂಪಾಯಿ ಮೌಲ್ಯದ ಕಳವು ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕುಖ್ಯಾತ ಕನ್ನ ಕಳವು ಮಾಡುತ್ತಿದ್ದ ಆರೋಪಿಯನ್ನು  ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ  ಅರ್ಧ ಕೆ. ಜಿ. ಚಿನ್ನಾಭರಣ ಮತ್ತು 31 ಕೆ. ಜಿ. ತೂಕದ ಬೆಳ್ಳಿಯ ಅಭರಣಗಳು ಸೇರಿದಂತೆ 55 ಲಕ್ಷ ರೂಪಾಯಿ ಮೌಲ್ಯದ ಕಳವು ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ.

ಕೆ.ಎಸ್. ಲೇಔಟ್ ನ ಚಂದ್ರಾನಗರ ಪೈಪ್ ಲೈನ್ ನಿವಾಸಿ ರವಿಶಂಕರ್ (25) ಬಂಧಿತ ಆರೋಪಿ. ಈತ ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳ ಕಳವು ಮಾಡಿ ತಲೆ ಮರೆಸಿಕೊಂಡಿದ್ದ.

ಹಲಸೂರು ಗೇಟ್, ಕೆ.ಆರ್. ಪುರಂ, ಎಲೆಕ್ಟ್ರಾನಿಕ್ ಸಿಟಿ, ಯಶವಂತಪುರ, ಹನುಮಂತನಗರ, ಶಿಡ್ಲಘಟ್ಟ, ಸೋಲದೇವನಹಳ್ಳಿ ಪೊಲೀಸ್  ಠಾಣೆ ವ್ಯಾಪ್ತಿಗಳಲ್ಲಿ ಕನ್ನ ಕಳವು ಮಾಡಿದ್ದ ಸುಮಾರು 7 ಕನ್ನ ಕಳವು ಪ್ರಕರಣಗಳು ಪತ್ತೆಯಾಗಿವೆ.

55 ಲಕ್ಷ ರೂಪಾಯಿ ಮೌಲ್ಯದ 501 ಗ್ರಾಂ ತೂಕದ ಚಿನ್ನದ ಒಡವೆಗಳು ಮತ್ತು 31  ಕೆ. ಜಿ. ತೂಕದ ಬೆಳ್ಳಿಯ ವಸ್ತುಗಳನ್ನು ತನಿಖೆಯ ವೇಳೆಯಲ್ಲಿ ವಶಪಡಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com