ರಾಜಧಾನಿಯಲ್ಲಿ ಇಂದು ಸಹ ರೈತರು, ಸಾರಿಗೆ ನೌಕರರ ಬೃಹತ್ ಪ್ರತಿಭಟನೆ: ವಿಧಾನಸೌಧ ಮುತ್ತಿಗೆಗೆ ನಿರ್ಧಾರ 

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೃಷಿ ಸುಧಾರಣಾ ಕಾನೂನುಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ರೈತರು ಇಂದು ಕೂಡಾ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.  
ರೈತರ ಪ್ರತಿಭಟನಾ ಜಾಥಾದ ಚಿತ್ರ
ರೈತರ ಪ್ರತಿಭಟನಾ ಜಾಥಾದ ಚಿತ್ರ

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೃಷಿ ಸುಧಾರಣಾ ಕಾನೂನುಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ರೈತರು ಇಂದು ಕೂಡಾ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.  

ಇಂದು ಮಧ್ಯಾಹ್ನ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯೋಜಿಸಿದ್ದು, ಅಪಾರ ಸಂಖ್ಯೆಯ ರೈತರು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇರುವುದಾಗಿ ರಾಜ್ಯ ರೈತ ಸಂಘ ಹಾಗೂ ರಾಜ್ಯ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ರೈತರ ಬೃಹತ್ ಜಾಥಾ ಆರಂಭವಾಗಲಿದ್ದು, ಸ್ವಾತಂತ್ರ್ಯ ಉದ್ಯಾನವನ, ಕೆಆರ್ ಸರ್ಕಲ್ ಮೂಲಕ ವಿಧಾನಸೌಧ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಇದರಿಂದಾಗಿ ಈ ಮಾರ್ಗದಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಈ ಮಧ್ಯೆ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸಾರಿಗೆ ನೌಕರರು ಕೂಡಾ ಪ್ರತಿಭಟನೆ ನಡೆಸಲಿದ್ದಾರೆ.  ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಸಿಬ್ಬಂದಿಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದು. ಸಂಚಾರದಲ್ಲಿ ಭಾರೀ ವ್ಯತ್ಯಯವಾಗುವ ಸಾಧ್ಯತೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com