ರಾಜ್ಯದಲ್ಲಿಂದು ಕೊರೋನಾಗೆ 16 ಬಲಿ, ಬೆಂಗಳೂರಿನಲ್ಲಿ 659 ಸೇರಿ 1,210 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಇಂದು 1,210 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,99,011ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್
ಕೊರೋನಾ ವೈರಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಇಂದು 1,210 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,99,011ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 16 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 11,928 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 1,807 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 8,68,471 ಏರಿಕೆಯಾಗಿದೆ. ಇನ್ನು18,593 ಸಕ್ರೀಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಇಂದು 659 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,77,251ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 6 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ನಗರದಲ್ಲಿ ಒಟ್ಟಾರೆ 4,224 ಮಂದಿ ಬಲಿಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com