ರೈತರ ಆತ್ಮಹತ್ಯೆ: ಪರಿಹಾರ ಯೋಜನೆಯ ವಿವರ ನೀಡಿ - ರಾಜ್ಯ ಸರ್ಕಾರಕ್ಕೆ 'ಹೈ' ಆದೇಶ
ಪ್ರಮುಖ ಬೆಳವಣಿಗೆಯಲ್ಲಿ, ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಸಹಾಯ ಹಸ್ತ ಚಾಚುವುದಕ್ಕಾಗಿ ಯಾವುದಾದರೂ ಯೋಜನೆ ಇದ್ದರೆ ಅದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಶುಕ್ರವಾರ ಹೈಕೋರ್ಟ್ ನಿರ್ದೇಶನ ನೀಡಿದೆ.
Published: 11th December 2020 07:22 PM | Last Updated: 11th December 2020 07:22 PM | A+A A-

ಹೈಕೋರ್ಟ್
ಬೆಂಗಳೂರು: ಪ್ರಮುಖ ಬೆಳವಣಿಗೆಯಲ್ಲಿ, ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಸಹಾಯ ಹಸ್ತ ಚಾಚುವುದಕ್ಕಾಗಿ ಯಾವುದಾದರೂ ಯೋಜನೆ ಇದ್ದರೆ ಅದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಶುಕ್ರವಾರ ಹೈಕೋರ್ಟ್ ನಿರ್ದೇಶನ ನೀಡಿದೆ.
ಅರ್ಜಿದಾರರು ನೀಡಿದ ರೈತರ ಆತ್ಮಹತ್ಯೆಯ ಅಂಕಿ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ಮೃತ ರೈತರ ಕುಟುಂಬಗಳಿಗೆ ನೀಡಿದ ನೆರವು/ ಪರಿಹಾರದ ವಿವರಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ(ಪಿಎಂಎಫ್‌ಬಿವೈ)ಯನ್ನು ರಾಜ್ಯದಲ್ಲಿ ಜಾರಿಗೊಳಿಸಲು ವಿಫಲವಾದ ಬಗ್ಗೆ ಅಖಿಲ ಕರ್ನಾಟಕ ರೈತ ಸಂಘ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ವಿಭಾಗೀಯ ಪೀಠ ಈ ಆದೇಶವನ್ನು ನೀಡಿದೆ.
ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನಲ್ಲಿ ರೈತರ ಆತ್ಮಹತ್ಯೆಗೆ ಕಾರಣಗಳ ಕುರಿತು ತನಿಖೆ ನಡೆಸಲು ಸೂಕ್ತ ಅಧಿಕಾರಿಯನ್ನು ನಾಮನಿರ್ದೇಶನ ಮಾಡುವಂತೆ ಮತ್ತು ಆತ್ಮಹತ್ಯೆಗೆ ಒಳಗಾದ ರೈತರ ಕುಟುಂಬ ಸದಸ್ಯರಿಗೆ ಪರಿಹಾರ ಅಥವಾ ನೆರವು ನೀಡಿದ ಬಗ್ಗೆ ವರದಿ ನೀಡುವಂತೆ ಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ.