ಕೃಷಿ ಕಾಯ್ದೆ ಹಿಂಪಡೆಯುವಂತೆ ಆಗ್ರಹ: ಸುವರ್ಣಸೌಧದ ಎದುರು ರೈತರ ಪ್ರತಿಭಟನೆ

ಕೇಂದ್ರ ಮತ್ತುರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿ ಖಂಡಿಸಿ ಗುರುವಾರ ಬೆಳಗಾವಿಯ ಸುವರ್ಣಸೌಧದ ಎದುರು ವಿವಿಧ ರೈತಪರ ಸಂಘಟನೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. 
ಪ್ರತಿಭಟನಾನಿರತ ರೈತರು
ಪ್ರತಿಭಟನಾನಿರತ ರೈತರು

ಬೆಳಗಾವಿ: ಕೇಂದ್ರ ಮತ್ತುರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿ ಖಂಡಿಸಿ ಗುರುವಾರ ಬೆಳಗಾವಿಯ ಸುವರ್ಣಸೌಧದ ಎದುರು ವಿವಿಧ ರೈತಪರ ಸಂಘಟನೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. 

ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೃಷಿ ನೀತಿ ಖಂಡಿಸಿ ರೈತರು ದೆಹಲಿ ಮತ್ತು ಬೆಂಗಲೂರಿನಲ್ಲಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ನೂರಾರು ರೈತರು ಪ್ರತಿಭಟನೆ ನಡೆಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂರಿ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರಗಳು ರೈತರ ಬದುಕಿನೊಂದಿಗೆ ಚೆಲ್ಲಾಟವಾಡಬಾರದು. ರೈತರಿಗೆ ಮಾರಕವಾಗಿರುವ ಮೂರು ಕೃಶಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವವರೆಗೂ ಹೋರಾಟ ಮುಂದುವರೆಯುತ್ತದೆ ಎಂದು ಹೇಳಿದರು. 

ಪ್ರವಾಹದಲ್ಲಿ ಮನೆ ಕಳೆದುಕೊಂಡಿದ್ದೇವೆ. ಬೆಳೆ ನಾಶವಾಗಿದೆ. ಆದರೆ, ರೈತರಿಗೆ ಏನೂ ಸಿಗುತ್ತಿಲ್ಲ. ಸರ್ಕಾರ ರೈತರನ್ನು ಕಡೆಗಣಿಸಿದೆ. ಕೂಡಲೇ ಪರಿಹಾರನೀಡಬೇಕು ಎಂದು ಆಗ್ರಹಿಸಿದರು. 

ಸುವರ್ಣ ವಿಧಾನಸೌಧದ ಸುತ್ತಲೂ ನಿಷೇಧಾಜ್ಞೆ ಜಾರಿಗೊಂಡಿರುವ ಹಿನ್ನೆಲೆಯಲ್ಲಿ ಸುವರ್ಣಸೌಧದ ಬಳಿ ಪೊಲೀಸರು ರೈತರನ್ನು ತಡೆದರು. ಸುವರ್ಣ ವಿಧಾನಸೌಧ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಗೊಳಿಸಲಾಗಿದೆ. ಇದರಿಂದಾಗಿ ರಸ್ತೆಯಲ್ಲೇ ರೈತರು ಪ್ರತಿಭಟನೆ ನಡೆಸಿದರು. 

ಪ್ರತಿಭಟನೆ ವೇಳೆ ರೈತಪರ ನಾಯಕ ರಾಜು ಪವಾರ್ ಅವರು ಮಾತನಾಡಿ, ತನ್ನ ಓಟಕ್ಕೆ ಜರನ್ನು ಬಳಕೆ ಮಾಡಿಕೊಳ್ಳುವುದನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಿಲ್ಲಿಸಬೇಕು. ಕೃಷಿ ಮಸೂದೆಯನ್ನು ಹಿಂಪಡೆಯೇ ಹೋದಲ್ಲಿ ನಮ್ಮ ಪ್ರತಿಭಟನೆ ಇದೇ ರೀತಿ ಮುಂದುವರೆಯಲಿದೆ ಎಂದು ಹೇಳಿದ್ದಾರೆ. 

ಪ್ರವಾಹದಲ್ಲಿ ಕುಸಿದುಬಿದ್ದಿರುವ ಮನೆಗಳನ್ನು ಸರ್ಕಾರ ಇನ್ನೂ ಪುನರ್ ನಿರ್ಮಾಣ ಮಾಡಿಕೊಟ್ಟಿಲ್ಲ. ಪ್ರವಾಹದಿಂದ ಎದುರಾದ ನಷ್ಟಕ್ಕೆ ಸರ್ಕಾರ ನೀಡುವ ಪರಿಹಾರಕ್ಕಾಗಿ ಸಾಕಷ್ಟು ರೈತರು ಕಾದು ಕುಳಿತಿದ್ದಾರೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com