ಮಾಜಿ ಸಚಿವ ಪ್ರೇಮಾನಂದ ಜೈವಂತ ನಿಧನ

ಮಾಜಿ ಸಚಿವ ಜನತಾ ಪಾರ್ಟಿಯ ಹಿರಿಯ ಮುಖಂಡರಾಗಿದ್ದ ಪ್ರೇಮಾನಂದ ಜೈವಂತ(74) ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಪ್ರೇಮಾನಂದ ಜೈವಂತ
ಪ್ರೇಮಾನಂದ ಜೈವಂತ

ಶಿರಸಿ: ಮಾಜಿ ಸಚಿವ ಜನತಾ ಪಾರ್ಟಿಯ ಹಿರಿಯ ಮುಖಂಡರಾಗಿದ್ದ ಪ್ರೇಮಾನಂದ ಜೈವಂತ(74) ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಪ್ರೇಮಾನಂದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

1994ರಲ್ಲಿ ಮೊದಲ ಬಾರಿಗೆ ಶಾಸಕರಾಗಿದ್ದ ಪ್ರೇಮಾನಂದ ಅವರು ಜೆ ಎಚ್ ಪಟೇಲರ ಸಚಿವ ಸಂಪುಟದಲ್ಲಿ ಅಬಕಾರಿ ಸಚಿವರಾಗಿದ್ದರು.1999ರಲ್ಲಿ ವಿವೇಕಾನಂದ ವೈದ್ಯರೆದುರು ಪಕ್ಷೇತರರಾಗಿ ಸ್ಪರ್ಧಿಸಿ ಸೋಲನ್ನು ಕಂಡಿದ್ದರು. 

ಜನತಾ ಪಾರ್ಟಿ ತೊರೆದು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಪ್ರೇಮಾನಂದ ಅವರಿಗೆ ಪತ್ನಿ ಹಾಗೂ ಮೂವರು ಮಕ್ಕಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com