ಕೊನೆಗೂ ನಟಿ ಸಂಜನಾ ಗಲ್ರಾನಿಗೆ ಜಾಮೀನು ನೀಡಿದ ಹೈಕೋರ್ಟ್!

ಸ್ಯಾಂಡಲ್ವುಡ್ ಡ್ರಗ್ ದಂಧೆ ಪ್ರಕರಣ ಸಂಬಂಧ ಜೈಲುಪಾಲಾಗಿರುವ ನಟಿ ಸಂಜನಾ ಗಲ್ರಾನಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ. 

Published: 11th December 2020 03:45 PM  |   Last Updated: 11th December 2020 05:56 PM   |  A+A-


Sanjana Galrani

ಸಂಜನಾ ಗಲ್ರಾನಿ

Posted By : Vishwanath S
Source : Online Desk

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ ದಂಧೆ ಪ್ರಕರಣ ಸಂಬಂಧ ಜೈಲುಪಾಲಾಗಿರುವ ನಟಿ ಸಂಜನಾ ಗಲ್ರಾನಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ. 

ಅನಾರೋಗ್ಯದಿಂದ ಬಳಲುತ್ತಿರುವ ಗಲ್ರಾನಿಗೆ ಶಸ್ತ್ರ ಚಿಕಿತ್ಸೆ ಮಾಡುವ ಅಗತ್ಯವಿದೆ ಎಂದು ವಾಣಿ ವಿಲಾಸ ಆಸ್ಪತ್ರೆ ವೈದ್ಯರು ಹೈಕೋರ್ಟ್ ಗೆ ವರದಿ ಸಲ್ಲಿಸಿದ್ದು ಈ ವರದಿ ಹಿನ್ನೆಲೆಯಲ್ಲಿ ಹೈಕೋರ್ಟ್ ಜಾಮೀನು ನೀಡಿದೆ. 

ಚಿಕಿತ್ಸೆ ಸಂಬಂಧ ಜಾಮೀನು ನೀಡುವಂತೆ ಕೋರಿ ಸಂಜನಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ. 

ಸಂಜನಾ ಗಲ್ರಾನಿ ಅಸ್ತಮಾ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರಂತೆ. ಚಳಿಗಾಲದಲ್ಲಿ ಇದು ಉಲ್ಬಣವಾಗುವ ಸಾಧ್ಯತೆ ಹೆಚ್ಚಿದೆ. ಹಿಂದೊಮ್ಮೆ ಶಸ್ತ್ರ ಚಿಕಿತ್ಸೆಗೂ ಒಳಗಾಗಿದ್ದಾಗಿ ಸಂಜನಾ ಅರ್ಜಿಯಲ್ಲಿ ನಮೂದಿಸಿದ್ದರು. 

ಸೆಪ್ಟೆಂಬರ್ 8 ರಂದು ಸಂಜನಾ ಗಲ್ರಾನಿ ಮನೆ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಸಂಜನಾ ಗಲ್ರಾನಿಯನ್ನು ವಿಚಾರಣೆಗೆ ಕರೆದು, ನಂತರ ಬಂಧಿಸಿದ್ದರು.

Stay up to date on all the latest ರಾಜ್ಯ news
Poll
Coronil tablets

ಕೋವಿಡ್-19 ವಿರುದ್ಧಪತಂಜಲಿಯ ಕೊರೋನಿಲ್ ಮಾತ್ರೆಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ನೀವು ಭಾವಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp