ಶಸ್ತ್ರಚಿಕಿತ್ಸೆಗೆ ಆಯುರ್ವೇದ ವೈದ್ಯರಿಗೆ ಅನುಮತಿ: ಇಂದು ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ 

ಕೇಂದ್ರ ಸರ್ಕಾರವು ಆಯುರ್ವೇದ ವೈದ್ಯರಿಗೆ ಕೆಲವು ಶಸ್ತ್ರ ಚಿಕಿತ್ಸೆ ನಡೆಸಲು ಅವಕಾಶ ನೀಡಿರುವುದನ್ನು ವಿರೋಧಿಸಿ ಅಲೋಪತಿ ವೈದ್ಯರು ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಒಪಿಡಿ (ಹೊರರೋಗಿ ವಿಭಾಗದ) ಸೇವೆಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ಮುಂದಾಗಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೇಂದ್ರ ಸರ್ಕಾರವು ಆಯುರ್ವೇದ ವೈದ್ಯರಿಗೆ ಕೆಲವು ಶಸ್ತ್ರ ಚಿಕಿತ್ಸೆ ನಡೆಸಲು ಅವಕಾಶ ನೀಡಿರುವುದನ್ನು ವಿರೋಧಿಸಿ ಅಲೋಪತಿ ವೈದ್ಯರು ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಒಪಿಡಿ (ಹೊರರೋಗಿ ವಿಭಾಗದ) ಸೇವೆಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ಮುಂದಾಗಿರುವುದರಿಂದ ಇಂದು ಖಾಸಗಿ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆಗೆ ರೋಗಿಗಳಿಗೆ ವ್ಯತ್ಯಯವುಂಟಾಗುತ್ತಿದೆ. 

ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಇಂದು ಎಂದಿನಂತೆ ಕಾರ್ಯನಿರ್ವಹಿಸಲಿದ್ದು ಎಲ್ಲಾ ರೀತಿಯ ಸೇವೆಗಳು ದೊರಕುತ್ತವೆ. 
ಗ್ಯಾಂಗ್ರಿನ್, ಹಲ್ಲಿನ ರೂಟ್ ಕೆನಾಲ್, ಅಪೆಂಡಿಕ್ಸ್, ಪಿತ್ತಕೋಶ, ಅಪಾಯವಲ್ಲದ ಗೆಡ್ಡೆ ತೆಗೆಯುವುದು ಮೊದಲಾದ ಸಾಮಾನ್ಯ ಶಸ್ತ್ರಚಿಕಿತ್ಸೆಗಳನ್ನು ನಡೆಸಲು ಆಯುರ್ವೇದ ವೈದ್ಯರಿಗೆ ಅವಕಾಶ ನೀಡಿ ಕೇಂದ್ರ ಸರ್ಕಾರ ನಿಯಮ ಹೊರಡಿಸಿತ್ತು. 

ಇದರಿಂದ ಖಾಸಗಿ ಅಲೋಪತಿ ವೈದ್ಯರ ಸೇವೆಗೆ ತೊಂದರೆಯಾಗುತ್ತದೆ ಎಂದು ಆರೋಪಿಸಿ ಕೇಂದ್ರದ ನಿರ್ಧಾರ ಖಂಡಿಸಿ ಮುಷ್ಕರ ನಡೆಸುತ್ತಿದ್ದಾರೆ. ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಈ ಧರಣಿ ನಡೆಯುತ್ತಿದೆ. ಮುಷ್ಕರಕ್ಕೆ ಖಾಸಗಿ ಆಸ್ಪತ್ರೆಗಳು, ನರ್ಸಿಂಗ್ ಹೋಂ ಅಸೋಸಿಯೇಷನ್(ಫಾನಾ) ಸೇರಿದಂತೆ ವಿವಿಧ ವೈದ್ಯ ಸಂಘಟನೆಗಳು ಬೆಂಬಲ ಸೂಚಿಸಿವೆ. ಒಳರೋಗಿ ವಿಭಾಗಗಳಲ್ಲಿ ವೈದ್ಯರು ಕಪ್ಪು ಪಟ್ಟಿ ಧರಿಸಿ ಎಂದಿನಂತೆ ಸೇವೆ ಮುಂದುವರಿಸಲು ನಿರ್ಧರಿಸಿದ್ದಾರೆ. ತುರ್ತು ಚಿಕಿತ್ಸೆಗಳು ಹಾಗೂ ದೂರವಾಣಿ ಸಮಾಲೋಚನೆಗಳು ಎಂದಿನಂತೆ ಇಂದು ಕೂಡ ಸಿಗಲಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com