ಒಂದು ದಿನದ ಪರಿಷತ್ ಅಧಿವೇಶನ ಕರೆಯಲು ರಾಜ್ಯಪಾಲರಿಗೆ ಮನವಿ: ಕೋಟ ಶ್ರೀನಿವಾಸ ಪೂಜಾರಿ

ಬಹು ಚರ್ಚಿತ ಗೋಹತ್ಯೆ ನಿಷೇಧ ಮಸೂದೆಯನ್ನು ಅಂಗೀಕರಿಸಲು, ಸಭಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಅಂಗೀಕಾರಕ್ಕೆ ಅನುಕೂಲವಾಗುವಂತೆ  ಒಂದು ದಿನದ ವಿಧಾನ ಪರಿಷತ್ ಅಧಿವೇಶನವನ್ನು ಕರೆಯಲು ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ. 
ಕೋಟ ಶ್ರೀನಿವಾಸ ಪೂಜಾರಿ
ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ಬಹು ಚರ್ಚಿತ ಗೋಹತ್ಯೆ ನಿಷೇಧ ಮಸೂದೆಯನ್ನು ಅಂಗೀಕರಿಸಲು, ಸಭಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಅಂಗೀಕಾರಕ್ಕೆ ಅನುಕೂಲವಾಗುವಂತೆ  ಒಂದು ದಿನದ ವಿಧಾನ ಪರಿಷತ್ ಅಧಿವೇಶನವನ್ನು ಕರೆಯಲು ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ. 

ಪರಿಷತ್ತಿನ ಅಧ್ಯಕ್ಷರು ಸದನವನ್ನು ಹಠಾತ್ತನೆ ಮುಂದೂಡಿದ್ದ ಕಾರಣ ಇದಕ್ಕೆ ಅಡ್ಡಿಯಾಯಿತು ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ.ವಿರುದ್ಧ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆ ಆಗಬೇಕೆಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ಮೀನುಗಾರಿಕೆ ಸಚಿವರೂ ಆದ ವಿಧಾನ ಪರಿಷತ್ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಇಂದು ಸಚಿವ, ಮೇಲ್ಮನೆ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಐದು ಸದಸ್ಯರ ಬಿಜೆಪಿ ನಿಯೋಗ ಸಭೆ ಸೇರಿ ರಾಜ್ಯಪಾಲ ವಜುಭಾಯ್ ವಾಲಾ ಅವರನ್ನು ಭೇಟಿಯಾಗಿ ಪರಿಷತ್ ಅಧ್ಯಕ್ಷ ಪ್ರತಾಪ್ ಚಂದ್ರಶೆಟ್ಟಿ ವಿರುದ್ಧ ದೂರು ಸಲ್ಲಿಸಿದ್ದಾರೆ. ಸದನವನ್ನು ಹಠಾತ್ ಮುಂದೂಡಿಕೆ ಮಾಡಿರುವ ಸಂಬಂಧ ಅವರ ವಿರುದ್ಧ  ಕ್ರಮ ಕೈಗೊಳ್ಳುವಂತೆ ನಿಯೋಗವು ರಾಜ್ಯಪಾಲರಿಗೆ ಮನವಿ ಮಾಡಿತು.

"ಸಭಾಪತಿಯ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿ ಚರ್ಚೆ ನಡೆಸಬೇಕಾಗಿತ್ತು. ಆದರೆ ಸಭಾಧ್ಯಕ್ಷರು ಚರ್ಚೆಗೆ ಅವಕಾಶ ನಿಡದೆ ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ. ರಾಜ್ಯಪಾಲರು ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ." ಸಚಿವ ಪೂಜಾರಿ ಹೇಳಿದ್ದಾರೆ.

ಇನ್ನೊಂದೆಡೆ ಮುಖ್ಯಮಂತ್ರಿ ಬಿ ಎಸ್ ಯಡಿಯುರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ಗೋಹತ್ಯೆ ನಿಷೇಧ ಮಸೂದೆಯನ್ನು ಅಂಗೀಕರಿಸುವುದನ್ನು ಖಚಿತಪಡಿಸಿಕೊಳ್ಳಲು ಪರಿಷತ್ತಿನ ಒಂದು ದಿನದ ಅಧಿವೇಶನ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆಎಂದು ಹೇಳಿದರು.

ಮೊದಲಿನಂತೆ ಪರಿಷತ್ ಅಧಿವೇಶನವನ್ನು ಡಿಸೆಂಬರ್ 17 ರವರೆಗೆ ಮುಂದುವರಿಸಲು ಮತ್ತು ವಿವಿಧ ವಿಷಯಗಳ ಬಗ್ಗೆ ಚರ್ಚಿಸಲು, ಗೋಹತ್ಯೆ ನಿಷೇಧ ಸೂದೆ ಸೇರಿದಂತೆ ಹಲವಾರು ಮಸೂದೆಗಳನ್ನು ಅಂಗೀಕರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ ಅವರು, "ಪರಿಷತ್ ಅಧ್ಯಕ್ಷರು ಹಠಾತ್ತನೆ ಸದನ ಮುಂದೂಡಿಕೆ ಮಾಡಿದ್ದಾರೆ" ಎಂದದ್ದಲ್ಲದೆ ಅಧ್ಯಕ್ಷರ ಕ್ರಮವನ್ನು ಅಸ್ವಾಭಾವಿಕ ಎಂದು ಟೀಕಿಸಿದ ಮುಖ್ಯಮಂತ್ರಿ, ಮಸೂದೆಗೆ ತಿದ್ದುಪಡಿ ತರಲು ಅಧ್ಯಕ್ಷರು ರಾಜ್ಯ ಸರ್ಕಾರದೊಂದಿಗೆ ಸಹಕರಿಸುತ್ತಿಲ್ಲ ಎಂದು ಆರೋಪಿಸಿದರು

"ಈಗಾಗಲೇ ಮಸೂದೆ ಕಾನೂನು ರೀತಿಯಲ್ಲಿ ಪರಿಣಾಮಕಾರಿಯಾಗುವಂತೆ ಸುಗ್ರೀವಾಜ್ಞೆಯನ್ನು ಪ್ರಕಟಿಸುವ ಯೋಜನೆಯನ್ನು ನಾವು ಹೊಂದಿದ್ದೇವೆ. ವಿಧಾನಸಭೆ ಇದಾಗಲೇ ಮಸೂದೆಯನ್ನು ಅಂಗೀಕರಿಸಿದೆ." ಅವರು ಹೇಳಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com