ಬಳ್ಳಾರಿಯಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್ ಮೈದಾನ ನಿರ್ಮಾಣ; ಸ್ಥಳೀಯ ಪ್ರತಿಭೆಗಳಿಗೆ ಸಹಾಯ

ಗಣಿ ನಾಡು ಬಳ್ಳಾರಿಯಲ್ಲಿ ಶೀಘ್ರದಲ್ಲೇ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್ ಮೈದಾನ ನಿರ್ಮಾಣವಾಗಲಿದ್ದು, ಇದರಿಂದ ಸ್ಥಳೀಯ ಕ್ರಿಕೆಟ್ ಪ್ರತಿಭೆಗಳಿಗೆ ನೆರವಾಗಲಿದೆ.
ಕ್ರಿಕೆಟ್ ಮೈದಾನದ ಜಾಗ ವೀಕ್ಷಿಸಿದ ಶಾಸಕ ಸೋಮಶೇಖರ್ ರೆಡ್ಡಿ
ಕ್ರಿಕೆಟ್ ಮೈದಾನದ ಜಾಗ ವೀಕ್ಷಿಸಿದ ಶಾಸಕ ಸೋಮಶೇಖರ್ ರೆಡ್ಡಿ

ಬಳ್ಳಾರಿ: ಗಣಿ ನಾಡು ಬಳ್ಳಾರಿಯಲ್ಲಿ ಶೀಘ್ರದಲ್ಲೇ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್ ಮೈದಾನ ನಿರ್ಮಾಣವಾಗಲಿದ್ದು, ಇದರಿಂದ ಸ್ಥಳೀಯ ಕ್ರಿಕೆಟ್ ಪ್ರತಿಭೆಗಳಿಗೆ ನೆರವಾಗಲಿದೆ.

ಈ ಕುರಿತಂತೆ ಈಗಾಗಲೇ ಜಿಲ್ಲಾಡಲಿತ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಕೆಎಸ್ ಸಿಎ ಬಳ್ಳಾರಿಯಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್ ಮೈದಾನ ನಿರ್ಮಾಣಕ್ಕೆ ಒಪ್ಪಂದಕ್ಕೆ ಸಹಿ ಹಾಕಿವೆ. ಬಳ್ಳಾರಿ ಹೊರ ವಲಯದಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಸ್ಥಳ ಗುರುತುಪತ್ತೆ  ಕೂಡ ನಡೆದಿದೆ. ಹೊಸಪೇಟೆ-ಬೆಂಗಳೂರು ಹೆದ್ದಾರಿಯಲ್ಲಿ ಕ್ರಿಕೆಟ್ ಮೈದಾನಕ್ಕೆ ಜಾಗ ಗುರುತು ಮಾಡಲಾಗಿದೆ. ಒಂದು ವೇಳೆ ಕ್ರಿಕೆಟ್ ಮೈದಾನ ನಿರ್ಮಾಣವಾದರೆ ಕಲ್ಯಾಣ ಕರ್ನಾಟಕ ಪ್ರಾಂತ್ಯದ ಅತೀ ದೊಡ್ಡ ಕ್ರಿಕೆಟ್ ಮೈದಾನ ಎಂಬ ಕೀರ್ತಿಗೆ ಭಾಜನವಾಗಲಿದೆ.

ಈಗಾಗಲೇ ಕೆಎಸ್ ಸಿಎ ಆಯೋಜಿಸುವ ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್)ನಲ್ಲಿ ಬಳ್ಳಾರಿ ಟಸ್ಕರ್ಸ್ ತಂಡ ಕೂಡ ಆಡುತ್ತಿದ್ದು, ಹೊಸ ಮೈದಾನ ನಿರ್ಮಾಣದಿಂದ ಸ್ಥಳೀಯ ಕ್ರಿಕೆಟ್ ಪ್ರತಿಭೆಗಳಿಗೆ ನೆರವಾಗಲಿದೆ. 

ಈ ಬಗ್ಗೆ ಮಾತನಾಡಿದ ಬಳ್ಳಾರಿ ನಗರಾಭಿವೃದ್ಧಿ (ಬುಡಾ) ಪ್ರಾಧಿಕಾರದ ಅಧ್ಯಕ್ಷ ದಮ್ಮರು ಶೇಖರ್ ಅವರು, ಹೊಸಪೇಟೆ-ಬೆಂಗಳೂರು ಹೆದ್ದಾರಿಯ ಹಲದಹಳ್ಳಿಯಲ್ಲಿ ಕ್ರಿಕೆಟ್ ಮೈದಾನ ನಿರ್ಮಾಣವಾಗಲಿದೆ. ಇಲ್ಲಿಂದ ಕೆಲವೇ ಕಿಮೀಗಳ ಅಂತರದಲ್ಲಿ ಅಂದರೆ 8 ಕಿಮೀ ದೂರದಲ್ಲಿ  ಹೊಸಪೇಟೆ ಇದೆ. ಈ ಜಾಗವನ್ನು ಈಗಾಗಲೇ ಕೆಎಸ್ ಸಿಎ ಅಧಿಕಾರಿಗಳು ವೀಕ್ಷಣೆ ಮಾಡಿದ್ದು, ಸುಮಾರು 40 ಎಕರೆ ಭೂಮಿಯನ್ನು ಕ್ರೀಡಾಂಗಣ ನಿರ್ಮಾಣಕ್ಕೆ ಮೀಸಲಿಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಇನ್ನು ಜಿಲ್ಲಾಡಳಿತದ ನಿರ್ಧಾರಕ್ಕೆ ಸ್ಥಳೀಯರು ಬೆಂಬಲ ವ್ಯಕ್ತಪಡಿಸಿದ್ದು, ಪ್ರದೀಪ್ ಎಂಬ ಸ್ಥಳೀಯ ನಿವಾಸಿ ಹಾಗೂ ಕ್ರಿಕೆಟ್ ಪ್ರೇಮಿ ಜಿಲ್ಲಾಡಳಿತದ ಕ್ರಮ ಉತ್ತಮವಾದದ್ದು. ಇದರಿಂದ ಸ್ಥಳೀಯ ಪ್ರತಿಭೆಗಳು ಅಭ್ಯಾಸ ನಡೆಸಲು ನೆರವಾಗಲಿದೆ ಎಂದು ಹೇಳಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com