ಸಾರಿಗೆ ಮುಷ್ಕರ: ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಚಾಲಕ ಹೃದಯಾಘಾತದಿಂದ ಸಾವು
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಸ್ಸು ಚಾಲಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
Published: 12th December 2020 01:47 PM | Last Updated: 12th December 2020 01:47 PM | A+A A-

ಸಂಗ್ರಹ ಚಿತ್ರ
ಬೆಳಗಾವಿ: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಸ್ಸು ಚಾಲಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ವಡಗಾವಿಯ ನಿವಾಸಿ ದತ್ತಾ ಮಂಡೋಳ್ಕರ್ (58) ಮೃತ ಚಾಲಕ. ಮೃತರು ಬೆಳಗಾವಿಯ ಎರಡನೇ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಶನಿವಾರ ನಡೆದಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಇವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮನೆಗೆ ವಾಪಸ್ಸಾಗಿದ್ದರು. ತಡರಾತ್ರಿ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಇನ್ನು ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ರಾಜ್ಯದಲ್ಲಿ ನಿನ್ನೆಯಿಂದ ಪ್ರತಿಭಟನೆ ನಡೆಯುತ್ತಿದ್ದು, ಇಂದು ಬೆಂಗಳೂರಿನಲ್ಲಿ ಕುಟುಂಬದವರ ಜತೆಗೇ ಕುಳಿತು ಧರಣಿ ನಡೆಸುತ್ತಿದ್ದಾರೆ.