ತುಮಕೂರು: ಎರಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚುನಾವಣೆ ಬಹಿಷ್ಕಾರ

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಗುಬ್ಬಿ ತಾಲೂಕಿನ  ಅಂಕಸಂದ್ರ ಮತ್ತು ಮಚಲದೊರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಗ್ರಾಮಸ್ಥರು ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ತುಮಕೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಗುಬ್ಬಿ ತಾಲೂಕಿನ  ಅಂಕಸಂದ್ರ ಮತ್ತು ಮಚಲದೊರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಗ್ರಾಮಸ್ಥರು ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ.

ಹೀಗಾಗಿ ಗ್ರಾಮ ಪಂಚಾಯಿತಿ ಚುನಾವಣೆಗೆ ಯಾರೋಬ್ಬರು ನಾಮಪತ್ರ ಸಲ್ಲಿಸಿಲ್ಲ ಎಂದು ತುಮಕೂರು ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ತಿಳಿಸಿದ್ದಾರೆ.  ಈ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವುದಾಗಿ ಹೇಳಿದ್ದಾರೆ. ಯೋಜನೆಗೆ ಮೀಸಲಾದ 25.65 ಕೋಟಿ ರೂ.ಗಳನ್ನು ಬೇರೆಡೆ ವರ್ಗಾಯಿಸಲಾಗಿದೆ ಎಂದು ನಿವಾಸಿಗಳು ಆರೋಪಿಸಿದ್ದಾರೆ.

ಶಾಶ್ವತ ಕುಡಿಯುವ ನೀರಿನ ಹೋರಾಟ ಸಮಿತಿ ಅಡಿಯಲ್ಲಿ ಶಿರಾ ತಾಲೂಕಿನ ಬುಕ್ಕಾ ಪಟ್ಣ ಮತ್ತು ಗೋಪಾಲದೇವರಹಳ್ಳಿ ನಿವಾಸಿಗಳು ಡಿಸೆಂಬರ್ 11 ರಂದು ಪತ್ರ ಬರೆದಿದ್ದಾರೆ. ಆದರೆ ಚುನಾವಣಾ ನೀತಿ ಸಂಹಿತೆ ಜಾರಿಲ್ಲಿರುವ ಕಾರಣ, ಗ್ರಾಮ ಪಂಚಾಯಿತಿ ಚುನಾವಣೆ ನಂತರ ಯೋಜನೆ ಮುಂದುವರಿಸುವುದಾಗಿ ಶಾಸಕ ಡಾ.ಸಿಎಂ ರಾಜೇಶ್ ಗೌಡ ತಿಳಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com