ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿ ಸ್ಥಾಪನೆ: ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿ ಸ್ಥಾಪನೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ. 
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿ ಸ್ಥಾಪನೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ. 

ವಕೀಲ ಎಸ್. ಬಸವರಾಜ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘2020 ನವೆಂಬರ್ 23ರ ಅಧಿಸೂಚನೆಗೆ ಅನುಗುಣವಾಗಿ ರಾಜ್ಯ ಸರ್ಕಾರ ಕೈಗೊಂಡಿರುವ ಎಲ್ಲಾ ಕ್ರಮಗಳು ನ್ಯಾಯಾಲಯದ ಆದೇಶಗಳಿಗೆ ಒಳಪಟ್ಟಿರುತ್ತದೆ’ ಎಂದು ಹೇಳಿದೆ.

ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ಕುರಿತು ರಾಜ್ಯ ಸರ್ಕಾರ ಕೈಗೊಳ್ಳಬೇಕಾದ ಎಲ್ಲಾ ಕ್ರಮಗಳು ಈ ನ್ಯಾಯಾಲಯದ ಆದೇಶಗಳಿಗೆ ಒಳಪಟ್ಟಿರುತ್ತವೆ  ಎಂದು ಕರ್ನಾಟಕ ಹೈಕೋರ್ಟ್ ಸೋಮವಾರ ತಿಳಿಸಿದೆ.

ಲಿಂಗಾಯತ ಸಮುದಾಯದ ಮತದಾರರನ್ನು ಸೆಳೆಯುವುದು ಈ ಮಂಡಳಿ ಸ್ಥಾಪನೆಯ ಉದ್ದೇಶವಾಗಿದೆ’ ಎಂದು ಅರ್ಜಿದಾರರು ದೂರಿದ್ದಾರೆ. ‘ವೀರಶೈವ ಲಿಂಗಾಯತ ಸಮುದಾಯದವರು ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇನ್ನೂ ನೋಂದಣಿಯಾಗದ ಮಂಡಳಿಗೆ ಸರ್ಕಾರ 500 ಕೋಟಿ ರು ಅನುದಾನ ನೀಡಿದೆ.

ಈ ಮಂಡಳಿ ಸ್ಥಾಪನೆಯಿಂದ12ನೇ ಶತಮಾನದಲ್ಲಿ ಸಮಾಜ ಸುಧಾರಕ ಬಸವಣ್ಣ ಸ್ಥಾಪಿಸಿದ್ದ ತತ್ವ ಸಿದ್ದಾಂತವನ್ನು ನಾಶ ಪಡಿಸುತ್ತದೆ ಎಂದು ಆರೋಪಿಸಿದ್ದಾರೆ.

ಅವರು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಮಂಡಳಿಯನ್ನು ಕಂಪನಿ ರೂಪದಲ್ಲಿ ಸ್ಥಾಪಿಸುವುದು ಅಗತ್ಯವೆಂದು ಸರ್ಕಾರ ಪರಿಗಣಿಸುತ್ತದೆ ಎಂದು ಸರ್ಕಾರ ಹೇಳಿದೆ. ಆದರೆ, ಆಡಳಿತ ಪಕ್ಷದ ನಿಷ್ಠರಿಗೆ ಅದರ ಜವಾಬ್ದಾರಿ ವಹಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಮಂಡಳಿ ಸ್ಥಾಪನೆ ಕಾನೂನು ಬಾಹಿರ’ ಎಂದು ಅವರು ಪ್ರತಿಪಾದಿಸಿದ್ದಾರೆ.
ಈ ಸಮುದಾಯದವರು ರಾಜ್ಯದಲ್ಲಿ ಶೇ.17 ರಷ್ಟು ಇದ್ದಾರೆ, ಹೀಗಾಗಿ ಮಂಡಳಿ ಸ್ಥಾಪಿಸಿರುವುದು ರಾಜಕೀಯ ಓಲೈಕೆಗಾಗಿ ಎಂದು ಅರ್ಜಿದಾರರು ದೂರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com