ಟ್ಯೂಷನ್'ಗೆ ಬಂದಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಟ್ಯೂಷನ್'ಗೆ ತೆರಳಿದ್ದ ಅಪ್ರಾಪ್ತ ಬಾಲಕಿ ಮೇಲೆ ಶಿಕ್ಷಕಿಯ ಪತಿಯೇ ಅತ್ಯಾಚಾರ ನಡೆಸಿರುವ ಘಟನೆಯೊಂದು ಮಚೋಹಳ್ಳಿಯಲ್ಲಿ ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಟ್ಯೂಷನ್'ಗೆ ತೆರಳಿದ್ದ ಅಪ್ರಾಪ್ತ ಬಾಲಕಿ ಮೇಲೆ ಶಿಕ್ಷಕಿಯ ಪತಿಯೇ ಅತ್ಯಾಚಾರ ನಡೆಸಿರುವ ಘಟನೆಯೊಂದು ಮಚೋಹಳ್ಳಿಯಲ್ಲಿ ನಡೆದಿದೆ. 

ರವಿ ಕಿರಣ್ ಅಲಿಯಾಸ್ ಕಿರಣ್ (26) ಅತ್ಯಾಚಾರ ನಡೆಸಿದ ಆರೋಪಿಯಾಗಿದ್ದಾನೆ. ಆರೋಪಿಯ ಪತ್ನಿ ಟ್ಯೂಷನ್ ನಡೆಸುತ್ತಿದ್ದರು. ಆರೋಪಿ ಕ್ಯಾಬ್ ಚಾಲಕನಾಗಿದ್ದನೆಂದು ವರದಿಗಳು ತಿಳಿಸಿವೆ. 

ವರ್ಷದ ಹಿಂದೆ ಘಟನೆ ನಡೆದಿದ್ದು, ಇದೀಗ ಘಟನೆ ಬೆಳಕಿಗೆ ಬಂದಿದೆ. 10ನೇ ತರಗತಿ ಓದುತ್ತಿದ್ದ ಬಾಲಕಿ ಟ್ಯೂಷನ್'ಗೆಂದು ಶಿಕ್ಷಕಿಯ ಮನೆಗೆ ಬಂದಿದ್ದಾಳೆ. ಈ ವೇಳೆ ಶಿಕ್ಷಕಿ ಮನೆಯಲ್ಲಿರಲಿಲ್ಲ ಎನ್ನಲಾಗಿದ್ದು, ಈ ಸಮಯವನ್ನೇ ದುರ್ಬಳಕೆ ಮಾಡಿಕೊಂಡ ಆರೋಪಿ ಬಾಲಕಿಯನ್ನು ರೂಮಿನೊಳಗೆ ಎಳೆದೆಯ್ದು ಅತ್ಯಾಚಾರವೆಸಗಿದ್ದಾನೆಂದು ವರದಿಗಳಿಂದ ತಿಳಿದುಬಂದಿದೆ. 

ಘಟನೆ ಬಗ್ಗೆ ಬಾಲಕಿ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಆದರೆ, ಮರ್ಯಾದೆಗೆ ಅಂಜಿದ ಅವರು ಪೊಲೀಸರಿಗೆ ಮಾಹಿತಿ ನೀಡಲು ಹಿಂದೇಟು ಹಾಕಿದ್ದಾರೆ. ಅಲ್ಲದೆ ತಮ್ಮ ಪುತ್ರಿಗೂ ವಿಚಾರವನ್ನು ಯಾರಿಗೂ ಹೇಳದಂತೆ ತಿಳಿಸಿದ್ದಾರೆ. 

ಈ ನಡುವೆ ಆರೋಪಿ ಕಿರಣ್ ತನ್ನ ಸ್ನೇಹಿತರೊಂದಿಗೆ ಈ ವಿಚಾರವನ್ನು ಹೇಳಿಕೊಂಡಿದ್ದು, ಆರೋಪಿ ಸ್ನೇಹಿತರು ನೆರೆಮನೆಯವರೊಂದಿಗೆ ಹೇಳಿದ್ದಾರೆ. ಬಳಿಕ ನೆರೆಮನೆಯವರು ಕೂಡಲೇ ಪೊಲೀಸರಿಗೆ ದೂರು ನೀಡುವಂತೆ ತಿಳಿಸಿದ್ದಾರೆ. 

ಇದರಂತೆ ಬಾಲಕಿಯ ಪೋಷಕರು ದೂರು ನೀಡಿದ್ದು, ದೂರಿನ ಅನ್ವಯ ಆರೋಪಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com