ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕುದುರೆ ರೇಸ್ ಆನ್ ಲೈನ್ ಬೆಟ್ಟಿಂಗ್'ಗೆ ನೀಡಲಾಗಿದ್ದ ಅನುಮತಿ ಹಿಂಪಡೆಯಲಾಗಿದೆ: ಹೈಕೋರ್ಟ್'ಗೆ ರಾಜ್ಯ ಸರ್ಕಾರ

ಬೆಂಗಳೂರು ಟರ್ಫ್ ಕ್ಲಬ್'ಗೆ ಆನ್'ಲೈನ್ ಬೆಟ್ಟಿಂಗ್'ಗೆ ನೀಡಲಾಗಿದ್ದ ಅನುಮತಿಯನ್ನು ಹಿಂಪಡೆಯಲಾಗಿದೆ ಎಂದು ಹೈಕೋರ್ಟ್'ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. 

ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್'ಗೆ ಆನ್'ಲೈನ್ ಬೆಟ್ಟಿಂಗ್'ಗೆ ನೀಡಲಾಗಿದ್ದ ಅನುಮತಿಯನ್ನು ಹಿಂಪಡೆಯಲಾಗಿದೆ ಎಂದು ಹೈಕೋರ್ಟ್'ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. 

ಬೆಂಗಳೂರು ಟರ್ಫ್ ಕ್ಲಬ್'ಗೆ ಆನ್'ಲೈನ್ ಬೆಟ್ಟಿಂಗ್'ಗೆ ಸರ್ಕಾರ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಬೆಂಗಳೂರಿನ ಶಾಂತಿ ನಗರದ ನಿವಾಸಿಯಾದ ಸಿ.ಗೋಪಾಲ್ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. 

ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಟರ್ಫ್ ಕ್ಲಬ್'ಗೆ ನೋಟಿಸ್ ಜಾರಿ ಮಾಡಿತ್ತು. ಕುದುರೆ ರೇಸ್ ಗೆ ಆನ್ ಲೈನ್ ಬೆಟ್ಟಿಂಗ್ ಗೆ ಅನುಮತಿ ಹೇಗೆ ಕೊಟ್ಟಿರಿ? ಸರ್ಕಾರ ಅನುಮತಿ ಅಸಂಬದ್ಧವಾಗಿದೆ ಎಂದು ಹೇಳಿತ್ತು. ಅಲ್ಲದೆ, ಡಿ.16 ರಿಂದ ಆನ್ ಲೈನ್ ಬೆಟ್ಟಿಂಗ್ ಗೆ ಅವಕಾಶ ನೀಡಲು ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದ್ದು, ಈ ಕುರಿತು ಸ್ಪಷ್ಟ ತೀರ್ಮಾನ ಕೈಗೊಳ್ಳುವಂತೆ ನಿರ್ದೇಶನ ನೀಡಿತ್ತು. 

ಈ ಎಲ್ಲಾ ಬೆಳವಣಿಗೆ ಬಳಿಕ ಹೈಕೋರ್ಟ್'ಗೆ ಹೇಳಿಕೆ ನೀೋಡಿರುವ ರಾಜ್ಯ ಸರ್ಕಾರ ಜುಲೈ 2 ರಂದು ಬೆಂಗಳೂರು ಟರ್ಫ್ ಕ್ಲಬ್'ಗೆ ಆನ್'ಲೈನ್ ಬೆಟ್ಟಿಂಗ್'ಗೆ ನೀಡಲಾಗಿದ್ದ ಅನುಮತಿಯನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದೆ. 

Related Stories

No stories found.

Advertisement

X
Kannada Prabha
www.kannadaprabha.com