ರಾಜ್ಯದಲ್ಲಿ ಇಂದು ಕೊರೋನಾಗೆ 8 ಬಲಿ, ಬೆಂಗಳೂರಿನಲ್ಲಿ 687 ಸೇರಿ 1,222 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಶುಕ್ರವಾರ 1,222 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 907123ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಶುಕ್ರವಾರ 1,222 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 907123ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 8 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 11,989 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಇಂದು 1039 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 8,79,735ಕ್ಕೆ ಏರಿಕೆಯಾಗಿದೆ. ಇನ್ನು 15,380 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 223 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಬೆಂಗಳೂರಿನಲ್ಲಿ ಇಂದು 687 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,81,623ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 4 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com