ಗ್ರಾ.ಪಂ.ಚುನಾವಣೆ: ಮತ ಚಲಾಯಿಸಲು ವೇತನ ಸಹಿತ ರಜೆ

ರಾಜ್ಯ ಚುನಾವಣಾ ಆಯೋಗವು ರಾಜ್ಯದಲ್ಲಿನ 30 ಜಿಲ್ಲೆಗಳ 5728 ಗ್ರಾಮ ಪಂಚಾಯಿತಿಗಳಿಗೆ 2 ಹಂತದಲ್ಲಿ ಚುನಾವಣೆ ನಡೆಸಲು ಆದೇಶಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯ ಚುನಾವಣಾ ಆಯೋಗವು ರಾಜ್ಯದಲ್ಲಿನ 30 ಜಿಲ್ಲೆಗಳ 5728 ಗ್ರಾಮ ಪಂಚಾಯಿತಿಗಳಿಗೆ 2 ಹಂತದಲ್ಲಿ ಚುನಾವಣೆ ನಡೆಸಲು ಆದೇಶಿಸಿದೆ.

ಚುನಾವಣಾ ವೇಳಾಪಟ್ಟಿಯಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೊದಲನೆ ಹಂತದಲ್ಲಿ ಹೊಸಕೋಟೆ ಹಾಗೂ ನೆಲಮಂಗಲ ತಾಲ್ಲೂಕುಗಳ 47 ಗ್ರಾಮ ಪಂಚಾಯಿತಿಗಳಿಗೆ ದಿನಾಂಕ 22.12.2020ರ‌ ಮಂಗಳವಾರದಂದು ಹಾಗೂ ಎರಡನೇ ಹಂತದಲ್ಲಿ ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ತಾಲ್ಲೂಕಿನ 45 ಗ್ರಾಮ ಪಂಚಾಯಿತಿಗಳಿಗೆ ದಿನಾಂಕ: 27.12.2020 ರ ಭಾನುವಾರದಂದು ಮತದಾನ ನಡೆಯಲಿದ್ದು, ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ಮತದಾರರಿಗೆ ವೇತನ ಸಹಿತ ರಜೆ ನೀಡಲು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶಿಸಿದ್ದಾರೆ.

ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯಾವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ Establishment ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ದಿನಾಂಕ: 22.12.2020ರ ಮಂಗಳವಾರದಂದು ಕರ್ನಾಟಕ ಪಂಚಾಯತ್ ರಾಜ್(ಚುನಾವಣೆ ನಡೆಸುವ) ನಿಯಮಗಳು, 1993ರ ನಿಯಮ 114ರಂತೆ ಪ್ರಜಾ ಪ್ರತಿನಿಧಿ ಕಾಯ್ದೆ 1954ರ ಸೆಕ್ಷನ್-135ಬಿ ಅಡಿಯಲ್ಲಿ ವೇತನ ಸಹಿತ ರಜೆಯನ್ನು ಘೋಷಿಸಿ ಆದೇಶಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com