ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ನಿಗದಿಪಡಿಸಿ: ರಾಜ್ಯ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೊಟೀಸ್ 

ಸಮಯ ಮುಗಿದರೂ ಕೂಡ 21 ನಗರ ಸ್ಥಳೀಯ ಸಂಸ್ಥೆಗಳಿಗೆ ಇನ್ನೂ ಚುನಾವಣಾ ದಿನಾಂಕ ನಿಗದಿಪಡಿಸದಿರುವ ಬಗ್ಗೆ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನಿನ್ನೆ, ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ನೊಟೀಸ್ ಜಾರಿ ಮಾಡಿದೆ.
ಚುನಾವಣಾ ಆಯೋಗ
ಚುನಾವಣಾ ಆಯೋಗ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಹೈಕೋರ್ಟ್ ಗಡುವು ನಿಗದಿಪಡಿಸಿದೆ. ಸಮಯ ಮುಗಿದರೂ ಕೂಡ 21 ನಗರ ಸ್ಥಳೀಯ ಸಂಸ್ಥೆಗಳಿಗೆ ಇನ್ನೂ ಚುನಾವಣಾ ದಿನಾಂಕ ನಿಗದಿಪಡಿಸದಿರುವ ಬಗ್ಗೆ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನಿನ್ನೆ, ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ನೊಟೀಸ್ ಜಾರಿ ಮಾಡಿದೆ.

ಇದು ಆಘಾತಕಾರಿ ವಿಷಯ ಎಂದು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರನ್ನೊಳಗೊಂಡ ವಿಭಾಗೀಯ ಪೀಠ, ಸ್ಥಳೀಯ ಸ್ವ ಆಡಳಿತ ಮತ್ತು ಚುನಾವಣೆಗಳು ಪ್ರತಿ 5 ವರ್ಷಗಳಿಗೊಮ್ಮೆ ನಡೆಸಿ ಬದಲಾವಣೆಯಾಗುತ್ತಿರಬೇಕು ಎಂದು ಹೇಳಿದೆ.

ಸಂವಿಧಾನ ವಿಧಿ 243-ಯು ಅಡಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳನ್ನು ನಡೆಸಬೇಕಾಗಿದ್ದು ಅದನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ಹೇಳಿದೆ. ಆದರೆ ಬಿಬಿಎಂಪಿ ಸೇರಿದಂತೆ ಅನೇಕ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯನ್ನೇ ನಡೆಸಿಲ್ಲ ಎಂದು ಹೈಕೋರ್ಟ್ ನ ವಿಭಾಗೀಯ ಪೀಠ ಛೀಮಾರಿ ಹಾಕಿದೆ.

ಮೂರು ನಗರಪಾಲಿಕೆಗಳಿಗೆ ಚುನಾವಣೆ ಬಾಕಿಯಿದೆ, ಅಲ್ಲದೆ 10 ನಗರ ಮುನ್ಸಿಪಲ್ ಕೌನ್ಸಿಲ್ ಗಳಿಗೆ, 6 ಪಟ್ಟಣ ಮುನ್ಸಿಪಲ್ ಕೌನ್ಸಿಲ್ ಗಳಿಗೆ ಮತ್ತು ಎರಡು ಪಟ್ಟಣ ಪಂಚಾಯತ್ ಗಳಿಗೆ ಅವಧಿ ಮುಗಿದರೂ ಚುನಾವಣೆ ನಡೆಸಿಲ್ಲ. ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಕಳೆದ ಡಿಸೆಂಬರ್ 4ರಂದು ಆದೇಶ ಹೊರಡಿಸಿ ನಿಗದಿತ ದಿನಾಂಕದೊಳಗೆ ಚುನಾವಣೆ ನಡೆಸುವಂತೆ ಸೂಚಿಸಲಾಗಿದೆ. ಬೆಳಗಾವಿಗೆ ಸಂಬಂಧಪಟ್ಟಂತೆ ಮೀಸಲಾತಿ ಅಧಿಸೂಚನೆ ಹೊರಡಿಸಲಾಗಿದೆ. ಬೆಳಗಾವಿ ನಗರ ಪಾಲಿಕೆಯ ಚುನಾವಣಾ ಪಟ್ಟಿ ಸಿದ್ದವಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

ಆದ್ದರಿಂದ, ಮೀಸಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮತ್ತು ಮೀಸಲಾತಿಯ ಅಧಿಸೂಚನೆಯನ್ನು ಇಂದಿನಿಂದ ಎರಡು ತಿಂಗಳಲ್ಲಿ ಪ್ರಕಟಿಸಲು ನಾವು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುತ್ತೇವೆ. ಎಸ್‌ಇಸಿ ಮೀಸಲಾತಿ ಅಧಿಸೂಚನೆಯ ದಿನಾಂಕದಿಂದ 45 ದಿನಗಳಲ್ಲಿ ಚುನಾವಣಾ ದಿನಾಂಕದ ಬಗ್ಗೆ ಘೋಷಿಸಬೇಕು. ಎಂದು ನ್ಯಾಯಾಲಯ ಹೇಳಿದೆ. ಹೈಕೋರ್ಟ್ ಇದೇ ಸಂದರ್ಭದಲ್ಲಿ ಕಲಬುರಗಿ ನಗರ ಪಾಲಿಕೆ, ಬಳ್ಳಾರಿ ನಗರ ಪಾಲಿಕೆ ಮತ್ತು ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆಗಳ ಚುನಾವಣೆಗೆ ದಿನಾಂಕ ಘೋಷಿಸುವಂತೆ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಆದೇಶ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com