ಬಿಬಿಎಂಪಿ ಚುನಾವಣೆ: ರಾಜ್ಯ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ 

ಮುಂದಿನ ಆರು ವಾರಗಳಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಕ್ಕೆ ಘೋಷಿಸಬೇಕು ಎಂದು ನಿರ್ದೇಶಿಸಿದ್ದ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಬಿಬಿಎಂಪಿ ಚುನಾವಣೆ: ರಾಜ್ಯ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ 

ನವದೆಹಲಿ: ಮುಂದಿನ ಆರು ವಾರಗಳಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯನ್ನು ಘೋಷಿಸಬೇಕು ಎಂದು ನಿರ್ದೇಶಿಸಿದ್ದ ಕರ್ನಾಟಕ ಹೈಕೋರ್ಟ್‌ನ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ,  ನ್ಯಾಯಮೂರ್ತಿಗಳಾದ  ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್ ನೇತೃತ್ವದ ನ್ಯಾಯಪೀಠವು ರಾಜ್ಯ ಚುನಾವಣಾ ಆಯೋಗ ಮತ್ತು ಮೂಲ ಅರ್ಜಿದಾರ ಎಂ.ಶಿವರಾಜು, ಅಬ್ದುಲ್ ವಾಜಿದ್ ಮತ್ತು ರವಿ ಜಗನ್ ಅವರಿಗೆ ನೋಟೀಸ್ ನೀಡಿ 2021ರ ಫೆಬ್ರವರಿ 5ಕ್ಕೆ ಮುಂದೂಡಿದೆ.

ಇದಕ್ಕೆ ಹಿಂದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆಸಲು ಹೈಕೋರ್ಟ್ ಡಿಸೆಂಬರ್ 4ರಂದು ಆದೇಶಿಸಿತ್ತು. ಹೈಕೋರ್ಟ್ ತೀರ್ಪಿನಲ್ಲಿ ಜ್ಯ ಸರ್ಕಾರ ಪಾಲಿಕೆಯನ್ನು ಈಗಿರುವ 198 ವಾರ್ಡ್​​​​​ಗಳಿಂದ 243 ವಾರ್ಡ್​ಗಳಿಗೆ ಹೆಚ್ಚಿಸಲು ಕೆಎಂಸಿ ಕಾಯ್ದೆಗೆ ತಿದ್ದುಪಡಿ ತಂದಿರುವ ಕ್ರಮ ಸರಿಯಾಗಿದೆಯಾದರೂ ಈ ತಿದ್ದುಪಡಿ ಚುನಾವಣೆಗೆ ಅನ್ವಯಿಸಿಲ್ಲ ಎಂದಿತ್ತು.ಅಲ್ಲದೆ ಪಾಲಿಕೆಗೆ ಸಂವಿಧಾನದ ವಿಧಿ 243 (ಯು) ಪ್ರಕಾರ ಚುನಾವಣೆ ನಡೆಸಬೇಕು ಎಂದು ನಿರ್ದೇಶನ ನೀಡಿತ್ತು.

ಆದರೆ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಮೆಟ್ಟಿಲೇರಿದ್ದು ಇಂದು ಈ ಸಂಬಂಧ ವಿಚಾರಣೆ ನಡೆದು ಹೈಕೋರ್ಟ್ ತೀರ್ಪಿಗೆ ತಡೆಯಾಜ್ಞೆ ನೀಡಿರುವ ಕಾರಣ ಬಿಬಿಎಂಪಿ ಚುನಾವಣೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಇದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com