ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ: ರೈತರಿಗೆ ರಂಗಕರ್ಮಿ ಪ್ರಸನ್ನ ಬೆಂಬಲ

ಕೃಷಿ ಮಸೂದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಬೆಂಬಲಿಸಲು ರಾಜ್ಯದಲ್ಲು ಅನಿರ್ಧಿಷ್ಟಾವಧಿ ಧರಣಿ ಮುಂದುವರಿದಿದೆ, ರೈತರ ಈ ಧರಣಿಗೆ ಹಿರಿಯ ರಂಗಕರ್ಮಿ ಪ್ರಸನ್ನ ತಮ್ಮ ಬೆಂಬಲ ಸೂಚಿಸಿದ್ದಾರೆ.
ರೈತರ ಪ್ರತಿಭಟನೆಗೆ ಪ್ರಸನ್ನ ಬೆಂಬಲ
ರೈತರ ಪ್ರತಿಭಟನೆಗೆ ಪ್ರಸನ್ನ ಬೆಂಬಲ

ಬೆಂಗಳೂರು: ಕೃಷಿ ಮಸೂದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಬೆಂಬಲಿಸಲು ರಾಜ್ಯದಲ್ಲು ಅನಿರ್ಧಿಷ್ಟಾವಧಿ ಧರಣಿ ಮುಂದುವರಿದಿದೆ, ರೈತರ ಈ ಧರಣಿಗೆ ಹಿರಿಯ ರಂಗಕರ್ಮಿ ಪ್ರಸನ್ನ ತಮ್ಮ ಬೆಂಬಲ ಸೂಚಿಸಿದ್ದಾರೆ.

‘ದೆಹಲಿಯಲ್ಲಿ ನಡೆಯುತ್ತಿರುವ ರೈತರ ಮಹಾ ಪ್ರತಿಭಟನೆ, ದೇಶವನ್ನು ಮುನ್ನಡೆಸುವ ಮಹತ್ವದ ಹೋರಾಟ. ಇದು ಶ್ರಮ ಸಂಸ್ಕೃತಿಯ ಗ್ರಾಮೀಣ ಬದುಕಿನ ರಕ್ಷಣೆಗಾಗಿ ನಡೆಯುತ್ತಿರುವ ಹೋರಾಟ’ ಎಂದು ಬಣ್ಣಿಸಿದರು.

‘ಇಂದು ನಮ್ಮನ್ನು ಆಳುತ್ತಿರುವವರದು ಕಾರ್ಪೊರೇಟ್ ಸಂಸ್ಕೃತಿ ಪರ ಧೋರಣೆಯಾಗಿದೆ. ಈ ಕಾರಣಕ್ಕಾಗಿ ನಗರಗಳು, ಮಹಾನಗರಗಳು ಬೃಹತ್ ತಿಪ್ಪೆಗುಂಡಿಗಳಾಗಿವೆ. ಸರ್ಕಾರಗಳ ಹೊಸ ಕೃಷಿ ಕಾಯ್ದೆಗಳು ಈ ತಿಪ್ಪೆಗುಂಡಿಗಳನ್ನು ಮತ್ತಷ್ಟು ಬೆಳೆಸುವ ದುರುದ್ದೇಶ ಹೊಂದಿದೆ’ ಎಂದು ಟೀಕಿಸಿದರು. ‘ರೈತರು, ಕರಕುಶಲ ಕರ್ಮಿಗಳು, ಕೃಷಿ ಕೂಲಿಕಾರರು ಯಾವುದೇ ಅಂಜಿಕೆ, ಆತಂಕ, ಕೀಳರಿಮೆ ಇಟ್ಟುಕೊಳ್ಳದೇ ಹೋರಾಟ ಮುಂದುವರಿಸಬೇಕು’ ಎಂದರು.

ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ನಿತ್ಯಾನಂದಸ್ವಾಮಿ, ‘ಕೇಂದ್ರ ಮತ್ತು ರಾಜ್ಯ ಸರ್ಕಾರ ತಂದಿರುವ ಕೃಷಿ ಕಾಯ್ದೆಗಳು ಕೂಲಿಕಾರರನ್ನು ನಿರುದ್ಯೋಗಿಯಾಗಿಸಿ ಹಸಿವಿಗೆ ತಳ್ಳುವ ಕಾನೂನುಗಳಾಗಿವೆ. ಈಗಾಗಲೇ 25 ರೈತ ಹೋರಾಟಗಾರರು ಚಳಿ ಮತ್ತಿತರ ಕಾರಣದಿಂದ ನಿಧನರಾಗಿದ್ದರೂ ನರೇಂದ್ರ ಮೋದಿನೇತೃತ್ವದ ಸರ್ಕಾರ ರೈತರೊಂದಿಗೆ ಮಾತುಕತೆಗೆ ಮುಂದಾಗುತ್ತಿಲ್ಲ’ ಎಂದು ದೂರಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com