ಕುಖ್ಯಾತ ಮನೆಗಳ್ಳನ ಬಂಧನ; 4.36 ಲಕ್ಷ ರೂ. ಮೌಲ್ಯದ ಮೊಬೈಲ್ ಫೋನ್ ಗಳು ವಶ; ಮೂವರು ಪರಾರಿ

ಮನೆ ಕಳ್ಳನೊಬ್ಬನನ್ನು ಬಂಧಿಸಿರುವ ಇಂದಿರಾನಗರ ಪೊಲೀಸರು, 4.36 ಲಕ್ಷ ರೂ. ಮೌಲ್ಯದ ವಿವಿಧ ಕಂಪನಿಗಳ 12 ಮೊಬೈಲ್ ಫೋನ್, ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮನೆ ಕಳ್ಳನೊಬ್ಬನನ್ನು ಬಂಧಿಸಿರುವ ಇಂದಿರಾನಗರ ಪೊಲೀಸರು, 4.36 ಲಕ್ಷ ರೂ. ಮೌಲ್ಯದ ವಿವಿಧ ಕಂಪನಿಗಳ 12 ಮೊಬೈಲ್ ಫೋನ್, ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಜಗಜೀವನ್ ರಾಮ್ ನಗರ 4ನೇ ಮೈನ್, ಡಿ ಸ್ಟ್ರೀಟ್ ನಿವಸಿ ತಬ್ರೇಜ್ ಖಾನ್ (23) ಬಂಧಿತ ಆರೋಪಿ.

ಪೂರ್ವ ವಿಭಾಗದ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯ 100 ಅಡಿ ರಸ್ತೆಯಲ್ಲಿರುವ ರಿಯಲನ್ಸ್ ಡಿಜಿಟಲ್ ಷೋ ರೂಂನಲ್ಲಿ ಸೆಪ್ಟಂಬರ್ 9ರಂದು ಮುಂಜಾನೆ ಸುಮಾರು 2,65,000 ರೂ. ಬೆಲೆ ಬಾಳುವ 4 ದುಬಾರಿ ಬೆಲೆಯ ಮೊಬೈಲ್ ಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿ ತಬ್ರೇಜ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ತನ್ನ ಸಹಚರರಾದ ವಾಹಿದ್, ಮಜರ್ ಮತ್ತು ಅನೀಲ್ ಎಂಬವರೊಂದಿಗೆ ಸೇರಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.

ಕಳ್ಳತನ ಮಾಡಿದ ವಾಹನದಲ್ಲಿ ಒಂಟಿಯಾಗಿ ಓಡಾಡುವರಿಂದ ಮೊಬೈಲ್ ಮತ್ತು ಬೆಲೆ ಬಾಳುವ ವಸ್ತುಗಳನ್ನು ದೋಚಿ ಜೀವನ ನಡೆಸುತ್ತಿರುವುದಾಗಿ ವಿಚಾರಣೆಯ ವೇಳೆ ತಿಳಿಸಿದ್ದಾರೆ. ವಾಹಿದ್, ಮಜರ್ ಮತ್ತು ಅನಿಳ್ ಅವರು ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ಶೋಧ ಕಾರ್ಯ ಮುಂದುವರಿಸಲಾಗಿದೆ.

ಆರೋಪಿಯಿಂದ 4,36,000 ರೂ.ಬೆಲೆ ಬಾಳುವ ವಿವಿಧ ಕಂಪನಿಗಳ 12 ಮೊಬೈಲ್ ಫೋನ್ ಗಳು ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಎಸ್. ಮುರುಗನ್, ಉಪ ಪೊಲೀಸ್ ಆಯುಕ್ತ ಡಾ.ಎಸ್.ಡಿ. ಶರಣಪ್ಪ ಅವರ ಮಾರ್ಗದರ್ಶನದಲ್ಲಿ ಹಲಸೂರು ಉಪ ವಿಭಾಗದ ಎಸಿಪಿ ಡಿ.ಕುಮಾರ್ ಅವರ ಸೂಚನೆಯಂತೆ ಇಂದಿರಾನಗರ ಪೊಲೀಸ್ ಇನ್ಸ್ ಪೆಕ್ಟರ್ ರಾಮಮೂರ್ತಿ ಮತ್ತು ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com