ಚಾಮರಾಜನಗರ: 'ಹಕ್ಕಿ ಹಬ್ಬ'ಕ್ಕೆ ದಿನಾಂಕ ಫಿಕ್ಸ್

ಪಕ್ಷಿಗಳ ಸ್ವರ್ಗವೆಂದೇ ಕರೆಯಲ್ಪಡುವ ಬಿಳಿಗಿರಿರಂಗನಾಥ ಬೆಟ್ಟದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇದೇ ಜನವರಿ 5 ರಿಂದ 7 ರವರೆಗೆ ಮೂರು ದಿನಗಳ ಕಾಲ ಹಕ್ಕಿ ಹಬ್ಬ ನಡೆಯಲಿದೆ.
ಹುಲಿ ಸಂರಕ್ಷಿತ ಪ್ರದೇಶ
ಹುಲಿ ಸಂರಕ್ಷಿತ ಪ್ರದೇಶ

ಚಾಮರಾಜನಗರ: ಪಕ್ಷಿಗಳ ಸ್ವರ್ಗವೆಂದೇ ಕರೆಯಲ್ಪಡುವ ಬಿಳಿಗಿರಿರಂಗನಾಥ ಬೆಟ್ಟದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇದೇ ಜನವರಿ 5 ರಿಂದ 7 ರವರೆಗೆ ಮೂರು ದಿನಗಳ ಕಾಲ ಹಕ್ಕಿ ಹಬ್ಬ ನಡೆಯಲಿದೆ. 

ಅರಣ್ಯ ಇಲಾಖೆ ಹಾಗೂ ರಾಜ್ಯ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಜಂಟಿಯಾಗಿ ಈ ಹಬ್ಬವನ್ನು ಆಯೋಜಿಸಿದ್ದು, ಈ ಬಾರಿ ಹೊಸ ಪ್ರಬೇಧದ ಹಕ್ಕಿಗಳು ಜನರ ಕಣ್ಮನ ಸೆಳೆಯಲಿವೆ. 

ಪಕ್ಷಿಗಳ ಸಂತತಿ ಸಂರಕ್ಷಣೆ, ಅಧ್ಯಯನ ಹಾಗೂ ಪಕ್ಷಿ ವೀಕ್ಷಣೆಯನ್ನು ಉತ್ತೇಜಿಸುವ ಸಲುವಾಗಿ ಪ್ರತಿ ವರ್ಷ ರಾಜ್ಯ ಮಟ್ಟದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಇದು 7 ವರ್ಷದ ಹಕ್ಕಿ ಹಬ್ಬವಾಗಿದೆ. 

ಈಗಾಗಲೇ ರಂಗನತಿಟ್ಟು, ದಾಂಡೇಲಿ, ಬಳ್ಳಾರಿ, ಮಂಗಳೂರು, ಚಿಕ್ಕಬಳ್ಳಾಪುರ, ಕಾರವಾರಗಳಲ್ಲಿ ಹಕ್ಕಿ ಹಬ್ಬ ನಡೆದಿದ್ದು, ಚಾಮರಾಜನಗರ ಜಿಲ್ಲೆಯಲ್ಲಿ ನಡೆಯುತ್ತಿರುವುದು ಇದೇ ಮೊದಲಾಗಿದೆ. 

ಮೂರು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಪಕ್ಷಿಗಳ ಬಗ್ಗೆ ಸಂವಾದ, ಉಪನ್ಯಾಸ ಹಾಗೂ ಅರಣ್ಯದ ವಿವಿಧ ಕಡೆಗಳಲ್ಲಿ ಹಕ್ಕಿಗಳ ವೀಕ್ಷಣೆಗೆ ಅವಕಾಶ ಇರಲಿದೆ. ರಾಜ್ಯ ಹಾಗೂ ಹೊರ ರಾಜ್ಯಗಳ ಪಕ್ಷಿ ವೀಕ್ಷಕರು, ಸಂಶೋಧಕರು, ಛಾಯಾಗ್ರಾಹಕರು ಇದರಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com