ದೇವಾಲಯಗಳಲ್ಲಿ ಹಣ ದುರ್ಬಳಕೆ, ಕ್ರಿಮಿನಲ್ ಮೊಕದ್ದಮೆ- ಮುಜರಾಯಿ ಇಲಾಖೆ ಎಚ್ಚರಿಕೆ
ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸಂಗ್ರಹವಾಗುವ ಹಣವನ್ನು ಖಾಸಗಿ ವಲಯದಿಂದ ನಿರ್ವಹಣೆ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದು, ಹಣ ದುರ್ಬಳಕೆಯಾದರೆ ಕಠಿಣ ಕ್ರಿಮಿನಲ್ ಕ್ರಮ ಕೈಗೊಳ್ಳುವುದಾಗಿ ಮುಜರಾಯಿ ಇಲಾಖೆ ಎಚ್ಚರಿಕೆ ನೀಡಿದೆ.
Published: 19th December 2020 06:59 PM | Last Updated: 19th December 2020 08:01 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸಂಗ್ರಹವಾಗುವ ಹಣವನ್ನು ಖಾಸಗಿ ವಲಯದಿಂದ ನಿರ್ವಹಣೆ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದು, ಹಣ ದುರ್ಬಳಕೆಯಾದರೆ ಕಠಿಣ ಕ್ರಿಮಿನಲ್ ಕ್ರಮ ಕೈಗೊಳ್ಳುವುದಾಗಿ ಮುಜರಾಯಿ ಇಲಾಖೆ ಎಚ್ಚರಿಕೆ ನೀಡಿದೆ.
ಈ ಕುರಿತು ಸುತ್ತೋಲೆ ಹೊರಡಿಸಲಾಗಿದ್ದು, ಮುಜರಾಯಿ ದೇವಾಲಯಗಳ ವ್ಯಾಪ್ತಿಯಲ್ಲಿ ನಡೆಯುವ ಜಾತ್ರೆ, ರಥೋತ್ಸವ, ಉತ್ಸವ ಹಾಗೂ ಇತರೆ ವಿಶೇಷ ಕಾರ್ಯಕ್ರಮಗಳಂದು ಖಾಸಗಿ ವ್ಯಕ್ತಿಗಳು ಹುಂಡಿಗಳನ್ನು ಇಟ್ಟು ಹಣ ಸಂಗ್ರಹ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ ಇದಕ್ಕೆ ಅವಕಾಶ ಕಲ್ಪಿಸಬಾರದು ಎಂದು ಹೇಳಿದೆ.
ಯಾವುದೇ ವ್ಯಕ್ತಿ ಸಂಸ್ಥೆ, ಸಮಿತಿ ಅಥವಾ ಅಭಿವೃದ್ಧಿ ಸಂಸ್ಥೆಯ ಹೆಸರಿನಲ್ಲಿ ಸೇವಾ ನಿಧಿಯನ್ನು ಸಂಗ್ರಹಿಸುವ ಅಥವಾ ದೇಣಿಗೆಯನ್ನು ಕ್ರೋಢೀಕರಣ ಮಾಡಲು ಅವಕಾಶವಿಲ್ಲ. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸುವಂತೆ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಆಡಳಿತಾಧಿಕಾರಿಗಳು, ವ್ಯವಸ್ಥಾಪನಾ ಸಮಿತಿಗೆ ಸೂಚನೆ ನೀಡಲಾಗಿದೆ.