ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ವ್ಯಕ್ತಿಯ ಬಂಧನ; 2.50 ಲಕ್ಷ ರೂ.ನಗದು ವಶ
ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು 2.50 ಲಕ್ಷ ರೂ. ನಗದು ಮತ್ತು ಒಂದು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.
Published: 20th December 2020 10:37 AM | Last Updated: 20th December 2020 10:37 AM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು 2.50 ಲಕ್ಷ ರೂ. ನಗದು ಮತ್ತು ಒಂದು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ತೋಕಸಂದ್ರ ಅಂಚೆ, ದುನ್ನಸಂದ್ರ ಗ್ರಾಮದ ನಿವಾಸಿ ಶಶಿಕುಮಾರ್ (25) ಬಂಧಿತ ಆರೋಪಿ. ಈತನಿಂದ ಬೆಟ್ಟಿಂಗ್ ಜೂಜಾಟಕ್ಕೆ ಸಂಬಂಧಿಸಿದ 2,50,000 ರೂ. ನಗದು ಮತ್ತು 1 ಮೊಬೈಲ್ ಪೋನ್ ವಶಪಡಿಸಿಕೊಂಡು ಆತನ ವಿರುದ್ಧ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯ ಬನಶಂಕರಿ 3ನೇ ಹಂತ ಔಟರ್ ರಿಂಗ್ ರಸ್ತೆ, ಕಾಮಾಕ್ಯ ಥಿಯೇಟರ್ ಮುಂಭಾಗದ ಕಟ್ಟಡ ನಂ.241 ಎರಡನೇ ಮಹಡಿಯಲ್ಲಿರುವ ನ್ಯೂ ಪ್ರಶಾಂತ್ ನಾನ್ ವೆಜ್ ಹೋಟೆಲ್ ನಲ್ಲಿ ವ್ಯಕ್ತಿಯೊಬ್ಬ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದಾನೆ. ಡಿಸೆಂಬರ್ 19ರಂದು ಇಂಡಿಯಾ-ಆಸ್ಟ್ರೇಲಿಯಾ ತಂಡಗಳ ನಡುವಿನ ಟೆಸ್ಟ್ ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಪಟ್ಟಂತೆ ಈ ತಂಡಗಳ ಸೋಲು ಮತ್ತು ಗೆಲುವಿನ ಬಗ್ಗೆ ಮೊಬೈಲ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ರೇಶ್ಯೂವನ್ನು ನೋಡಿಕೊಂಡು, ಮೊಬೈಲ್ ಫೋನ್ ಮೂಲಕ, ನಗದಾಗಿ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಬೆಟ್ಟಿಂಗ್ ಜೂಜಾಟ ನಡೆಸುತ್ತಿದ್ದಾನೆ ಬ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿದ ಕೇಂದ್ರ ಅಪರಾಧ ವಿಭಾಗ-ಸಿಸಿಬಿ ವಿಶೇಷ ವಿಚಾರಣಾ ದಳದ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.