ಗ್ರಾಮ ಪಂಚಾಯಿತಿ ಎರಡನೇ ಹಂತದ ಚುನಾವಣೆ: 37 ಸದಸ್ಯರ ಸ್ಥಾನಗಳಿಗೆ ಅವಿರೋಧ ಆಯ್ಕೆ

ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆ, ಎರಡನೇ ಹಂತದ ಗ್ರಾಮ ಪಂಚಾಯಿತಿಯ ಚುನಾವಣೆಯ ನಾಮಪತ್ರ ಸಲ್ಲಿಕೆಯು ಕೊನೆಯಾಗಿದ್ದು(ದಿನಾಂಕ: 11.12.2020 ರಿಂದ 16.12.2020 ರವರೆಗೆ) ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ತಾಲ್ಲೂಕಿನ ಒಟ್ಟು 45 ಗ್ರಾಮ ಪಂಚಾಯತಿಯ 770 ಸ್ಥಾನಗಳಲ್ಲಿ‌ ಯಾವುದೇ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಯಾಗದೆ ಖಾಲಿ ಉಳಿದಿಲ್ಲ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆ, ಎರಡನೇ ಹಂತದ ಗ್ರಾಮ ಪಂಚಾಯಿತಿಯ ಚುನಾವಣೆಯ ನಾಮಪತ್ರ ಸಲ್ಲಿಕೆಯು ಕೊನೆಯಾಗಿದ್ದು (ದಿನಾಂಕ: 11.12.2020 ರಿಂದ 16.12.2020 ರವರೆಗೆ) ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ತಾಲ್ಲೂಕಿನ ಒಟ್ಟು 45 ಗ್ರಾಮ ಪಂಚಾಯತಿಯ 770 ಸ್ಥಾನಗಳಲ್ಲಿ‌ ಯಾವುದೇ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಯಾಗದೆ ಖಾಲಿ ಉಳಿದಿಲ್ಲ.

ಸಲ್ಲಿಕೆಯಾಗಿರುವ ಒಟ್ಟು 3482 ನಾಮಪತ್ರಗಳ ಪೈಕಿ 44 ನಾಮಪತ್ರಗಳು ತಿರಸ್ಕೃತಗೊಂಡಿದ್ದು, 37 ಸದಸ್ಯರ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಹಾಗೂ 733 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಒಟ್ಟು 1934 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ 443 ಸ್ಥಾನಗಳಿಗೆ ಸಲ್ಲಿಕೆಯಾಗಿರುವ ಒಟ್ಟು 1952 ನಾಮಪತ್ರಗಳ ಪೈಕಿ 22 ನಾಮಪತ್ರಗಳು ತಿರಸ್ಕೃತಗೊಂಡಿದ್ದು, 15 ಸದಸ್ಯರ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಹಾಗೂ 1133 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದು, 428 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com