ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಟ್ಟಾ ಸುಬ್ರಹ್ಮಣ್ಯ ನಾಯ್ಡುಗೆ ಸಂಕಷ್ಟ

ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮತ್ತವರ ಪತ್ನಿ ಸೇರಿ ಇತರರು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ರದ್ದು ಮಾಡಿ ಆದೇಶಿಸಿದೆ. 
ಕಟ್ಟಾ ಸುಬ್ರಹ್ಮಣ್ಯ ನಾಯ್ಡು
ಕಟ್ಟಾ ಸುಬ್ರಹ್ಮಣ್ಯ ನಾಯ್ಡು

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮತ್ತವರ ಪತ್ನಿ ಸೇರಿ ಇತರರು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ರದ್ದು ಮಾಡಿ ಆದೇಶಿಸಿದೆ. 

ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಅವರ ಪತ್ನಿ ಸೌಭಾಗ್ಯ ಸೇರಿ 20ಕ್ಕೂ ಹೆಚ್ಚು ಮಂದಿ ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಿದ ನ್ಯಾಯ.ಜಾನ್ ಮೈಕೆಲ್ ಕುನ್ಹಾ ಅವರಿದ್ದ ಪೀಠ ಈ ಆದೇಶ ನೀಡಿದೆ. 

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣವನ್ನು ರದ್ದುಗೊಳಿಸಲು ನ್ಯಾಯಪೀಠ ನಿರಾಕರಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com