ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣ: ಕೋಲಾರ ಪೊಲೀಸರಿಂದ ಮೂವರ ಬಂಧನ

ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣವನ್ನು ಬೇಧಿಸಿರುವ ಕೋಲಾರ ಪೊಲೀಸರು ವಾರದ ಹಿಂದೆ ಪ್ರಕರಣದ ಪ್ರಮುಖ ಆರೋಪಿ ಕವಿರಾಜ್ ನನ್ನು ಬಂಧಿಸಿದ್ದರು. ಪ್ರಕರಣ ಸಂಬಂಧ ಈಗ ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದು, ಉಳಿದವರಿಗಾಗಿ ಶೋಧ ನಡೆಸುತ್ತಿದ್ದಾರೆ.
ವರ್ತೂರು ಪ್ರಕಾಶ್
ವರ್ತೂರು ಪ್ರಕಾಶ್

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣವನ್ನು ಬೇಧಿಸಿರುವ ಕೋಲಾರ ಪೊಲೀಸರು ವಾರದ ಹಿಂದೆ ಪ್ರಕರಣದ ಪ್ರಮುಖ ಆರೋಪಿ ಕವಿರಾಜ್ ನನ್ನು ಬಂಧಿಸಿದ್ದರು. ಪ್ರಕರಣ ಸಂಬಂಧ ಈಗ ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದು, ಉಳಿದವರಿಗಾಗಿ ಶೋಧ ನಡೆಸುತ್ತಿದ್ದಾರೆ.

ಉಲ್ಲಾಸ್ ರೆಡ್ಡಿ, ಲಿಖಿತ್ ಮತ್ತು ಮನೋಜ್ ಎಂಬ ಆರೋಪಿಗಳನ್ನು ಖಚಿತ ಮಾಹಿತಿ ಮೇರೆಗೆ ಕೊಡತಿ ಗೇಟ್ ಬಳಿ ಬಂಧಿಸಿದ್ದಾಗಿ ಕೋಲಾರ ಸೂಪರಿಂಡೆಂಟ್ ಆಫ್ ಪೊಲೀಸ್   ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.

ಆಂಧ್ರ ಪ್ರದೇಶ ಮತ್ತು ತಮಿಳು ನಾಡು ಪೊಲೀಸರ ಸಕಾರದೊಂದಿಗೆ ಉಳಿದ ಆರೋಪಿಗಳನ್ನು ಶೀಘ್ರವೇ ಬಂಧಿಸುವುದಾಗಿ ತಿಳಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಕವಿರಾಜ್ ನನ್ನು ಆರು ವಾರಗಳ ಕಸ್ಟಡಿಗೆ ತೆಗೆದುಕೊಂಡಿರುವುದಾಗಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.

ಕವಿರಾಜ್ ನನ್ನು ಬಂಧಿಸಿರುವ ಪೊಲೀಸರು ಆತ ರವಿ ಪೂಜಾರಿ ಸಹಚರನೆ ಎಂಬ ಬಗ್ಗೆ ತನಿಖೆ ನಡೆಸುತ್ತಿದೆ,ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಯುತ್ತಿದ್ದು, ತಂತ್ರಜ್ಞರ ತಂಡ ಮೊಬೈಲ್ ಫೋನ್ ಡಾಟಾ ಸಂಗ್ರಹಿಸುತ್ತಿದೆ ಎಂದು ಹೇಳಿದ್ದಾರೆ.  

ಮಾಜಿ ಸಚಿವ ವರ್ತೂರು ಪ್ರಕಾಶ್ ಮತ್ತವರ ಕಾರು ಚಾಲಕನನ್ನು ಅಪಹರಿಸಿದ್ದ ಕಿಡ್ನಾಪರ್ಸ್ ಇಬ್ಬರ ಮೇಲೆ ಹಲ್ಲೆ ನಡೆಸಿ 30 ಕೋಟಿ ರು ಗೆ ಬೇಡಿಕೆ ಇಟ್ಟಿದ್ದರು, ಡಿಸೆಂಬರ್ 2 ರಂದು ಪ್ರಕಾಶ್ ಬೆಳ್ಳಂದೂರು ಪೊಲೀಸರಿಗೆ ದೂರು ನೀಡಿದ್ದರು. 

ನವೆಂಬರ್ 25 ರಂದು ಕೋಲಾರದ ಬೀಳಗಿ ಹೊಸಹಳ್ಳಿಯ ತಮ್ಮ ಫಾರ್ಮ್ ಹೌಸ್ ನಿಂದ ತಮ್ಮನ್ನು ಅಪಹರಿಸಲಾಗಿತ್ತು ಎಂದು ದೂರು ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com