ಪೋಷಕರ ಪ್ರತಿಭಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು: ಸಿದ್ದರಾಮಯ್ಯ

ವಿದ್ಯಾರ್ಥಿಗಳ ಪೋಷಕರು ಖಾಸಗಿ ಶಾಲೆಗಳ‌ ಕಿರುಕುಳದ ವಿರುದ್ಧ ಪ್ರತಿಭಟನೆ ಮಾಡಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಖಾಸಗಿ ಶಾಲೆಗಳ ಜತೆ ಸರ್ಕಾರ ಶಾಮೀಲಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ವಿದ್ಯಾರ್ಥಿಗಳ ಪೋಷಕರು ಖಾಸಗಿ ಶಾಲೆಗಳ‌ ಕಿರುಕುಳದ ವಿರುದ್ಧ ಪ್ರತಿಭಟನೆ ಮಾಡಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಖಾಸಗಿ ಶಾಲೆಗಳ ಜತೆ ಸರ್ಕಾರ ಶಾಮೀಲಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ ತಾವು ಹಲವು ಪತ್ರ ಬರೆದಿದ್ದೇನೆ. ಒಂದಕ್ಕೂ ಉತ್ತರ ಬರಲಿಲ್ಲ. ಒಳ್ಳೆಯ ಅಭ್ಯಾಸ ಈ ಸರ್ಕಾರಕ್ಕೆ ಇಲ್ಲ. ಕೆಟ್ಟ ಅಭ್ಯಾಸಗಳು ಮಾತ್ರ ಈ ಸರ್ಕಾರಕ್ಕೆ ಇವೆ. ಇಸ್ಟ್ರಾನ್ ಕಂಪನಿ ಕಾರ್ಮಿಕರಿಗೆ ಕಿರುಕುಳ ಕೊಡುತ್ತಿದೆ. ಈ ಸಮಸ್ಯೆ ಬಗೆಹರಿಸಿ ಎಂದು ಪತ್ರ ಬರೆದಿದ್ದೆ. ಆದರೆ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಇದೊಂದು ಜವಾಬ್ದಾರಿ ಇಲ್ಲದ ಸರ್ಕಾರ. ಡೆಡ್ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ಖಾಸಗಿ ಶಾಲೆಗಳು ಮತ್ತು ಪೋಷಕರ ಸಮಸ್ಯೆ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದೆ. ಒಂದು ವರ್ಷ ಪರೀಕ್ಷೆ ಇಲ್ಲದೇ ಮಕ್ಕಳನ್ನು ಮುಂದಿನ ತರಗತಿಗೆ ಕಳುಹಿಸಿ ಕೊಡಿ ಎಂದು ಒತ್ತಾಯಿಸಿದ್ದೆ. ಅದಕ್ಕೂ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ, ಇದೀಗ ಪೋಷಕರು ಶಾಲೆಗಳ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ಸಮಸ್ಯೆ ಬಿಗಡಾಯಿಸದಂತೆ ಸರ್ಕಾರ ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಬಿಜೆಪಿ ಜತೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದೆ. ರೈತ ವಿರೋಧಿ ಕಾನೂನುಗಳಿಗೆ ಜೆಡಿಎಸ್ ಬೆಂಬಲ ಕೊಟ್ಟಿದೆ. ಸಭಾಪತಿ ಅವರನ್ನು ಕೆಳಗಿಳಿಸಲು ಬೆಂಬಲ ಕೊಟ್ಟಿದ್ದಾರೆ, ಹೀಗಾಗಿ ತಾವು ಈ ಹಿಂದೆ ಹೇಳಿದ್ದ ಜೆಡಿಎಸ್ ಎಂಬುದು ಬಿಜೆಪಿ ಬೀ ಟೀಮ್ ಎಂಬುದು ಈಗ ಸಾಬೀತಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ನಲ್ಲಿ ತಾವು ಆರಾಮವಾಗಿದ್ದೇನೆ. ಪಕ್ಷದ ಹಿರಿಯ ನಾಯಕರಲ್ಲಿ ತಾವು ಕೂಡ ಒಬ್ಬನಾಗಿದ್ದೇನೆ. ನಾನು ಕಾಂಗ್ರೆಸಿಗ, ನಾನೇಕೆ ಹೊಸ ಪಕ್ಷ ಕಟ್ಟಲಿ ಎಂದು ತಿರುಗೇಟು ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com