
ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್
ಬೆಂಗಳೂರು: ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಅವರಿಗೆ ಮಂಗಳವಾರ ಕೋವಿಡ್ ಸೋಂಕು ದೃಢಪಟ್ಟಿದೆ.ಈ ಕುರಿತು ಮಾಹಿತಿ ನೀಡಿರುವ ಅವರು, ವೈದ್ಯರ ಸಲಹೆ ಮರೆಗೆ ಕ್ವಾರಂಟೈನ್ ನಲ್ಲಿ ಇರುವುದಾಗಿ ತಿಳಿಸಿದ್ದಾರೆ.
ಕಳೆದ ಕೆಲ ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದವರು, ಕಾರ್ಯಕ್ರಮಗಳಲ್ಲಿ ಪಾಲ್ಗೊಂಡವರು ಮತ್ತು ಮಾಧ್ಯಮ ಮಿತ್ರರು ಕೂಡಲೇ ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
ಕೋವಿಡ್ ಸೋಂಕಿನ ಯಾವುದೇ ಲಕ್ಷಣಗಳು ಕಾಣಿಸಿಕೊಂಡಿಲ್ಲ ಹಾಗೂ ಅವರು ಆರೋಗ್ಯವಾಗಿದ್ದಾರೆ ಎಂದು ಆಯುಕ್ತರ ಕಚೇರಿ ಸಿಬ್ಬಂದಿ ದೃಢಪಡಿಸಿದ್ದಾರೆ.