ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಕೇಸುಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ಬಂಧ

ಸಂಸದರು, ಶಾಸಕರು ಸೇರಿದಂತೆ ಚುನಾಯಿತ ಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಸಾಮೂಹಿಕವಾಗಿ ಹಿಂತೆಗೆದುಕೊಳ್ಳುವ ನಿರ್ಧಾರಕ್ಕೆ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಹೈಕೋರ್ಟ್ ತಡೆ ನೀಡಿದೆ. 
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಸಂಸದರು, ಶಾಸಕರು ಸೇರಿದಂತೆ ಚುನಾಯಿತ ಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಸಾಮೂಹಿಕವಾಗಿ ಹಿಂತೆಗೆದುಕೊಳ್ಳುವ ನಿರ್ಧಾರಕ್ಕೆ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಹೈಕೋರ್ಟ್ ತಡೆ ನೀಡಿದೆ. 

ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ನೇತೃತ್ವದ ವಿಭಾಗೀಯ ಪೀಠ ಮಧ್ಯಂತರ ಆದೇಶ ನೀಡಿ, ಆರೋಪಿಗಳ ವಿರುದ್ಧ ಕೇಸನ್ನು ಆಗಸ್ಟ್ 31,2020ರ ಆದೇಶದ ಆಧಾರದ ಮೇಲೆ ಹಿಂತೆಗೆದುಕೊಳ್ಳದಂತೆ ರಾಜ್ಯ ಸರ್ಕಾರವನ್ನು ತಡೆದಿದೆ.

ಕೋರ್ಟ್ ಆದೇಶವನ್ನು ಪಾಲಿಸಲು ಸಮಯಾವಕಾಶವನ್ನು ಸರ್ಕಾರ ಕೇಳಿದೆ ಎಂದು ನ್ಯಾಯಪೀಠ ಹೇಳಿದೆ. ಅರ್ಜಿದಾರರಿಂದ ಮಧ್ಯಂತರ ಪರಿಹಾರಕ್ಕಾಗಿ ಕೋರಲಾಗಿದೆ. ಅದರಂತೆ, ಆಗಸ್ಟ್ 31, 2020 ರ ಆದೇಶದ ಆಧಾರದ ಮೇಲೆ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ನಿರ್ದೇಶಿಸುತ್ತೇವೆ ಎಂದು ನ್ಯಾಯಪೀಠ ಹೇಳಿದೆ.

61 ಕೇಸುಗಳನ್ನು ಹಿಂತೆಗೆದುಕೊಳ್ಳುವಂತೆ ಸಂಪುಟ ಸಮಿತಿಯಲ್ಲಿ ಸರ್ಕಾರ ತೆಗೆದುಕೊಂಡ ತೀರ್ಮಾನವನ್ನು ಪ್ರಶ್ನಿಸಿ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಕರ್ನಾಟಕ(ಪಿಯುಸಿಎಲ್-ಕೆ) ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com