ಬೆಂಗಳೂರು: 3 ತಿಂಗಳ ಹಿಂದೆ ಕಾಣೆಯಾಗಿದ್ದ ಅರ್ಚಕನ ಮೃತದೇಹ ಕೊಲೆಗೈದ ಸ್ಥಿತಿಯಲ್ಲಿ ಪತ್ತೆ
ಮೂರು ತಿಂಗಳ ಹಿಂದೆ ಕಾಣೆಯಾಗಿದ್ದ ಕಾಡುಗೋಡಿಯ ಕಾಶಿ ವಿಶ್ವನಾಥ ದೇವಾಲಯದ ಅರ್ಚಕ ನೀಲಕಂಠ ದೀಕ್ಷಿತ್ ಅವರನ್ನು ಕೊಲೆ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ.
Published: 22nd December 2020 07:01 PM | Last Updated: 22nd December 2020 07:01 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಮೂರು ತಿಂಗಳ ಹಿಂದೆ ಕಾಣೆಯಾಗಿದ್ದ ಕಾಡುಗೋಡಿಯ ಕಾಶಿ ವಿಶ್ವನಾಥ ದೇವಾಲಯದ ಅರ್ಚಕ ನೀಲಕಂಠ ದೀಕ್ಷಿತ್ ಅವರನ್ನು ಕೊಲೆ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಮೂರು ತಿಂಗಳ ಹಿಂದೆ ನೀಲಕಂಠ ದೀಕ್ಷಿತ್ (57) ಕಾಣೆಯಾಗಿದ್ದರು. ಈ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕಾಶಿ ವಿಶ್ವನಾಥ ದೇವಾಲಯದ ಅರ್ಚಕ ನೀಲಕಂಠ ದೀಕ್ಷಿತ್ ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದು ಪೊಲೀಸರು ತನಿಖೆ ಕೈಗೊಂಡು ಪತ್ತೆ ಕಾರ್ಯ ನಡೆಸುತ್ತಿದ್ದಾಗ ನೀಲಕಂಠ ದೀಕ್ಷಿತ್ ಅವರ ಅವರ ಮೃತದೇಹವು ಪತ್ತೆಯಾಗಿದ್ದು ಕೊಲೆಯಾಗಿರುವುದು ಕಂಡುಬಂದಿದೆ.
ಕಾಡುಗೋಡಿ ಪೊಲೀಸರು ತನಿಖೆ ತೀವ್ರಗೊಳಿಸಿ ಕೊಲೆಗಾರರ ಪತ್ತೆ ಕಾರ್ಯ ಕೈಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.