ಡಿ.27ರಂದು ಎರಡನೇ ಹಂತದಲ್ಲಿ 2,709 ಗ್ರಾ.ಪಂಗಳಿಗೆ ಮತದಾನ; 1.05 ಲಕ್ಷ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ: ಆಯೋಗ

ರಾಜ್ಯದ ಮೊದಲ ಹಂತದ 117 ಗ್ರಾಮಪಂಚಾಯತಿ ಚುನಾವಣೆಗೆ ಮಂಗಳವಾರ ಮತದಾನ ನಡೆದಿದ್ದು, ಉಳಿದ 109 ತಾಲೂಕುಗಳಿಗೆ ಡಿ.27ರಂದು ಎರಡನೇ ಹಂತದ ಮತದಾನ ನಡೆಯಲಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದ ಮೊದಲ ಹಂತದ 117 ಗ್ರಾಮಪಂಚಾಯತಿ ಚುನಾವಣೆಗೆ ಮಂಗಳವಾರ ಮತದಾನ ನಡೆದಿದ್ದು, ಉಳಿದ 109 ತಾಲೂಕುಗಳಿಗೆ ಡಿ.27ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಈ ಹಂತದಲ್ಲಿ 2,709 ಗ್ರಾಮ ಪಂಚಾಯಿತಿಗಳ 43,291 ಸ್ಥಾನಗಳಿಗೆ ಸ್ಪರ್ಧೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. 

ಇಲ್ಲಿಯವರೆಗೆ ಒಟ್ಟು 1,47,649 ನಾಮಪತ್ರಗಳು ಸ್ವೀಕೃತಗೊಂಡಿದ್ದು, 34,115 ಮಂದಿ ನಾಮಪತ್ರ ಹಿಂಪಡೆದಿದ್ದಾರೆ. 1,39,546 ಅಭ್ಯರ್ಥಿಗಳು ಕ್ರಮಬದ್ಧವಾಗಿ ನಾಮನಿರ್ದೇಶಿತಗೊಂಡಿದ್ದು, 216 ಸ್ಥಾನಗಳಿಗೆ ಯಾರೂ ನಾಮಪತ್ರ ಸಲ್ಲಿಸಿಲ್ಲ. 

ಈ ಪೈಕಿ 3,697 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೊನೆಯದಾಗಿ 39,378 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, 1,05,431 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಆಯೋಗದ ಪ್ರಕಟಣೆ ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com