ಅಯೋಧ್ಯೆ ರಾಮ ಮಂದಿರಕ್ಕೆ ನಿಧಿ ಸಂಗ್ರಹ: ವಿಹೆಚ್'ಪಿ ಅಭಿಯಾನ ಆರಂಭ 

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ 2021ರ ಜ.15ರಿಂದ ಫೆ.27ರವರೆಗೆ ವಿಶ್ವ ಹಿಂದೂ ಪರಿಷತ್ (ವಿಹೆಚ್'ಪಿ) ರಾಜ್ಯದಲ್ಲಿ ನಿಧಿ ಸಂಗ್ರಹ ಅಭಿಯಾನ ಹಮ್ಮಿಕೊಂಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ 2021ರ ಜ.15ರಿಂದ ಫೆ.27ರವರೆಗೆ ವಿಶ್ವ ಹಿಂದೂ ಪರಿಷತ್ (ವಿಹೆಚ್'ಪಿ) ರಾಜ್ಯದಲ್ಲಿ ನಿಧಿ ಸಂಗ್ರಹ ಅಭಿಯಾನ ಹಮ್ಮಿಕೊಂಡಿದೆ. 

ಸುದ್ದಿಗಾರರೊಂದಿಗೆ ಮಾತನಾಡಿದ ವಿಹೆಚ್'ಪಿಯ ಕೇಂದ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಡಿ ಅವರು, ‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟಸ್ಟ್‌ನ ಯೋಜನೆಯಂತೆ ಮಂದಿರ ನಿರ್ಮಾಣಕ್ಕಾಗಿ ನಿಧಿ ಸಂಗ್ರಹಿ ಸಲು ವಿಎಚ್‌ಪಿ ಸಂಪೂರ್ಣ ಸಹಕಾರ ನೀಡುತ್ತಿದೆ. ದೇಶದ 4 ಲಕ್ಷ ಹಳ್ಳಿಗಳನ್ನು ಹಾಗೂ 11 ಕೋಟಿ ಕುಟುಂಬಗಳನ್ನು ತಲುಪುವ ಗುರಿಯಿದೆ. ಕರ್ನಾಟಕದಲ್ಲಿ 27,500 ಹಳ್ಳಿಗಳನ್ನು ಸಂಪರ್ಕಿಸಿ, ಭಕ್ತರಿಂದ ಹಣ ಸಂಗ್ರಹಿಸುತ್ತೇವೆ ಎಂದು ಹೇಳಿದ್ದಾರೆ.

ತಲಾ 5 ಮಂದಿಯನ್ನು ಒಳಗೊಂಡ ನಮ್ಮ ಕಾರ್ಯಕರ್ತರು ಮನೆ ಮನೆಗೆ ತೆರಳಿ ಹಣ ಸಂಗ್ರಹಿಸುತ್ತಾರೆ. ರೂ.10, ರೂ.100 ಹಾಗೂ ರೂ.1000 ಮುದ್ರಿತ ಕೂಪನ್ ಮೂಲಕ ಹಣ ಸಂಗ್ರಹ ನಡೆಯಲಿದೆ. ರೂ.2 ಸಾವಿರಕ್ಕಿಂತ ಹೆಚ್ಚು ಹಣ ನೀಡಿದವರಿಗೆ ರಸೀದಿ ನೀಡಲಾಗುತ್ತದೆ. ಇದರಿಂದ ಭಾರತೀಯ ಆದಾಯ ತೆರಿಗೆ ಕಾಯ್ದೆಯ 80ಜಿ ಸೆಕ್ಷನ್ ಅಡಿಯಲ್ಲಿ ತೆರಿಗೆ ವಿನಾಯತಿ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ. 

ಈ ಹಣವನ್ನು 48 ಗಂಟೆಗಳೊಳಗಾಗಿ ತೀರ್ಥ ಕ್ಷೇತ್ರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ ಮೂರು ಬ್ಯಾಂಕ್ ಗಳ ಹತ್ತಿರದ ಬ್ರ್ಯಾಂಚ್ ಕೋಡ್ ನಂಬರ್'ಗಳನ್ನು ಹತ್ತಿರದ ಕಾರ್ಯಕರ್ತರಿಗೆ ನೀಡಲಾಗುತ್ತದೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com