ನೈಟ್‌ ಕರ್ಫ್ಯೂ ಇದ್ದರೂ ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಕ್ಯಾಬ್‌ಗಳ ಸಂಚಾರವಿರಲಿದೆ: ಲಕ್ಷ್ಮಣ ಸವದಿ

ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿದ್ದರೂ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಆಟೋ ರಿಕ್ಷಾಗಳು, ಕ್ಯಾಬ್‌ಗಳ ಸಂಚಾರವಿರಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಗುರುವಾರ ಹೇಳಿದ್ದಾರೆ.

Published: 24th December 2020 12:08 PM  |   Last Updated: 24th December 2020 12:08 PM   |  A+A-


Laxman Savadi

ಲಕ್ಷ್ಮಣ್ ಸವದಿ

Posted By : Manjula VN
Source : ANI

ಬೆಂಗಳೂರು: ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿದ್ದರೂ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಆಟೋ ರಿಕ್ಷಾಗಳು, ಕ್ಯಾಬ್‌ಗಳ ಸಂಚಾರವಿರಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಗುರುವಾರ ಹೇಳಿದ್ದಾರೆ. 

ಕೊರೊನಾ 2ನೇ ಅಲೆ ಹರಡುವಿಕೆ ತಡೆಯುವ ಮುಂಜಾಗ್ರತಾ ಕ್ರಮವಾಗಿ ಗುರುವಾರ ರಾತ್ರಿ 11 ರಿಂದ ರಾಜ್ಯಾದ್ಯಂತ ಕರ್ಫ್ಯೂ ಜಾರಿಯಾಗಲಿದೆ. ಈ ಬಗ್ಗೆ ಸರಕಾರ ಈಗಾಗಲೇ ಆದೇಶ ಹೊರಡಿಸಿದ್ದು, ಇಂದು ರಾತ್ರಿಯಿಂದ ಕರ್ಫ್ಯೂ ಜಾರಿಗೊಳ್ಳಲಿದೆ. 

ಈ ಬೆಳವಣಿಗೆಗಳ ನಡುವಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿರುವ ಲಕ್ಷ್ಮಣ ಸವದಿ ಅವರು, ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಆಟೋ ರಿಕ್ಷಾಗಳು, ಕ್ಯಾಬ್‌ಗಳು ರಾತ್ರಿ ಎಂದಿನಂತೆ ಸಂಚಾರ ನಡೆಸಲಿದೆ ಎಂದು ತಿಳಿಸಿದ್ದಾರೆ. 

ಈಗಾಗಲೇ ಈ ಬಗ್ಗೆ ಬೆಳಗಾವಿಯಲ್ಲಿ ಒಂದು ಬಾರಿ ಸ್ಪಷ್ಟನೆ ನೀಡಿದ್ದ ಸಚಿವರು, ರಾಜ್ಯ ರಸ್ತೆ ಸಾರಿಗೆ ಬಸ್‌ಗಳ ಸಂಚಾರಕ್ಕೆ ಯಾವುದೇ ತೊಂದರೆ ಅಥವಾ ವ್ಯತ್ಯಯ ಆಗುವುದಿಲ್ಲ ಎಂದಿದ್ದರು.

ಸಾರಿಗೆ ಬಸ್‌ಗಳ ಸಂಚಾರದಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದರು. ರಾತ್ರಿ ಹೊರಡುವ ಬಸ್‌ಗಳಲ್ಲಿ ಯಾವುದೇ ವ್ಯತ್ಯಾಸ ಆಗುವುದಿಲ್ಲ. ಸರಕು ಸಾಗಣೆ ವಾಹನಗಳು ಓಡಾಡಲಿವೆ. ಯಥಾಸ್ಥಿತಿ ಮುಂದುವರಿಯಲಿದೆ ಎಂದಿದ್ದರು. ಕೊರೊನಾ ಎರಡನೇ ಅಲೆ ಭೀತಿ ಹಿನ್ನೆಲೆ ಇಂದು ರಾತ್ರಿ 11 ಗಂಟೆಯಿಂದ ಮುಂಜಾನೆ 5 ಗಂಟೆ ವರೆಗೆ ರಾಜ್ಯದಲ್ಲಿ ನೈಟ್‌ ಕರ್ಫ್ಯೂ ಜಾರಿಯಾಗಲಿದೆ.

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp