ಆದಾಯ ತೆರಿಗೆ ಕಚೇರಿ ಎದುರು ಪ್ರತಿಭಟನೆ: ಡಿಕೆಶಿ, ಎಚ್ ಡಿಕೆ, ಪರಮೇಶ್ವರ್ ವಿರುದ್ಧದ ಎಫ್ ಐಆರ್ ರದ್ಧು

ಆದಾಯ ತೆರಿಗೆ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮತ್ತು ಶಾಸಕ ಜಿ.ಪರಮೇಶ್ವರ ಸೇರಿ ಇತರ ನಾಯಕರ ವಿರುದ್ಧದ ಎಫ್ಐಆರ್ ಅನ್ನು ಹೈಕೋರ್ಟ್‌ ರದ್ದುಪಡಿಸಿದೆ.
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ಆದಾಯ ತೆರಿಗೆ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮತ್ತು ಶಾಸಕ ಜಿ.ಪರಮೇಶ್ವರ ಸೇರಿ ಇತರ ನಾಯಕರ ವಿರುದ್ಧದ ಎಫ್ಐಆರ್ ಅನ್ನು ಹೈಕೋರ್ಟ್‌ ರದ್ದುಪಡಿಸಿದೆ. 

ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ರಾಜಕೀಯ ನಾಯಕರು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ವಿಭಾಗೀಯ ಪೀಠ, ವಿಚಾರಣೆ ನಡೆಸಿತು. ಪ್ರತಿಭಟನೆ ನಡೆಸಿದ ರಾಜಕೀಯ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮಲ್ಲಿಕಾರ್ಜುನ ಎಂಬುವರು ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.

ಒಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎರಡು ಎಫ್‌ಐಆರ್ ದಾಖಲಿಸಿದ್ದಾರೆ. ಇದು ಕಾನೂನು ಬಾಹಿರ’ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು. ವಾದ ಪುರಸ್ಕರಿಸಿದ ಪೀಠ, ಪೊಲೀಸರು ದಾಖಲಿಸಿದ್ದ ಎಫ್ಐಆರ್ ರದ್ದುಪಡಿಸಿ ಆದೇಶಿಸಿತು.

ಲೋಕಸಭೆ ಚುನಾವಣೆ ವೇಳೆ 2019ರ ಮಾರ್ಚ್ 28ರಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿತ್ತು. ಇದನ್ನು ಖಂಡಿಸಿ ಅಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com