ಕೊರೋನಾದಿಂದ ಸಮುದಾಯ ಉಳಿಸಿಕೊಳ್ಳಲು ಮಾದರಿ ಪ್ರಾಥಮಿಕ ಚಿಕಿತ್ಸಾ ಕೇಂದ್ರ ಸ್ಥಾಪನೆ: ಡಾ. ಸುಧಾಕರ್

ಸಮುದಾಯದ ಆರೋಗ್ಯವನ್ನು ಉಳಿಸಿಕೊಳ್ಳಬೇಕು ಎನ್ನುವ ದೃಷ್ಟಿಯಿಂದ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುತ್ತಿದ್ದು, ಆರೋಗ್ಯ ಸೇವೆಯಲ್ಲಿ ಇಡೀ ದೇಶದಲ್ಲೇ ಕರ್ನಾಟಕ ಮಾದರಿಯಾಗುವಂತೆ ಹೆಜ್ಜೆ ಇಡುತ್ತಿದ್ದೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್
ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್

ಬೆಂಗಳೂರು: ಮುಂದಿನ ದಿನಗಳಲ್ಲಿ ಕೊರೋನಾದಂತಹ ವ್ಯಾದಿಗಳು, ಸಮುದಾಯಕ್ಕೆ ಕೇಡು ತರುವಂತಹ ವೈರಾಣುಗಳಿಂದ ಸಮುದಾಯದ ಆರೋಗ್ಯವನ್ನು ಉಳಿಸಿಕೊಳ್ಳಬೇಕು ಎನ್ನುವ ದೃಷ್ಟಿಯಿಂದ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುತ್ತಿದ್ದು, ಆರೋಗ್ಯ ಸೇವೆಯಲ್ಲಿ ಇಡೀ ದೇಶದಲ್ಲೇ ಕರ್ನಾಟಕ ಮಾದರಿಯಾಗುವಂತೆ ಹೆಜ್ಜೆ ಇಡುತ್ತಿದ್ದೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಜೊತೆ ಚೆರ್ಚೆ ನಡೆಸಿದ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬ ಕನ್ನಡಿಗನಿಗೂ ಉಚಿತವಾಗಿ ಗುಣಮಟ್ಟದ ಆರೋಗ್ಯ ಸೇವೆ ಸಿಗಬೇಕು ಎನ್ನುವುದಾದರೆ ನಮ್ಮ ಸಮುದಾಯದ ಆರೋಗ್ಯ ವ್ಯವಸ್ಥೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಹಾಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮೂಲಭೂತ ಸೌಕರ್ಯ, ಆರೋಗ್ಯ ಸಿಬ್ಬಂದಿ ಹೊಸದಾಗಿ ನೇಮಕ ಮಾಡುವುದು ಸೇರಿದಂತೆ ಎಲ್ಲಾ ವಿಷಯಗಳ ಬಗ್ಗೆ ಕೂಲಂಕುಶವಾಗಿ ಪ್ರಾತ್ಯಕ್ಷಿಕೆ ಮೂಲಕ ಮುಖ್ಯಮಂತ್ರಿಗಳಿಗೆ ವಿವರಣೆ ನೀಡಲಾಗಿದೆ ಎಂದರು.

ಕೇರಳ ಮತ್ತು ತಮಿಳುನಾಡು ಇಡೀ ದೇಶದಲ್ಲೇ ಉತ್ತಮ ಸಮುದಾಯದ ಆರೋಗ್ಯ ವ್ಯವಸ್ಥೆ ಹೊಂದಿವೆ ಎನ್ನುವ ಹೆಗ್ಗಳಿಕೆ ಪಡೆದಿದ್ದು, ದೇಶದಲ್ಲಿ ಕರ್ನಾಟಕದ ಆರೋಗ್ಯ ವ್ಯವಸ್ಥೆ ಉತ್ತಮವಾಗಿರಬೇಕು  ಇಡೀ ದೇಶಕ್ಕೆ ನಮ್ಮ ರಾಜ್ಯ ಮಾದರಿಯಾಗಬೇಕು ಎನ್ನುವ ಕನಸು ಮುಖ್ಯಮಂತ್ರಿ ಅವರದ್ದಾಗಿದೆ. ಅವರ ಕನಸಿಗೆ ಪೂರಕವಾಗಿ ಮಾದರಿ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳ ಸ್ಥಾಪನೆ ಮಾಡಲು ನಿರ್ಧರಿಸಲಾಗಿದೆ ಎಂದು ಡಾ. ಕೆ. ಸುಧಾಕರ್ ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com