ವ್ಯಾಪಕ ಟೀಕೆ ಬೆನ್ನಲ್ಲೇ ನೈಟ್ ಕರ್ಫ್ಯೂ ಆದೇಶ ಹಿಂಪಡೆದ ರಾಜ್ಯ ಸರ್ಕಾರ!

ರಾಜ್ಯದಲ್ಲಿ ಇಂದಿನಿಂದ ಜಾರಿಯಾಗಬೇಕಿದ್ದ ನೈಟ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ. ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ನೈಟ್ ಕರ್ಫ್ಯೂ ಜಾರಿಗೆ ಮುನ್ನವೇ ಹಿಂಪಡೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಜಾರಿಯಾಗಬೇಕಿದ್ದ ನೈಟ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ. ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ನೈಟ್ ಕರ್ಫ್ಯೂ ಜಾರಿಗೆ ಮುನ್ನವೇ ಹಿಂಪಡೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ನೈಟ್ ಕರ್ಫ್ಯೂ ಜಾರಿ ಆದೇಶ ಹಿಂಪಡೆದಿರುವ ಬಗ್ಗೆ ಮುಖ್ಯಮಂತ್ರಿ ಬಿ..ಎಸ್. ಯಡಿಯೂರಪ್ಪ ಮಾದ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಸಿಎಂ ಮಾದ್ಯಮ ಪ್ರಕಟನೆ ಸಂಪೂರ್ಣ ವಿವರ ಹೀಗಿದೆ-

"ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ ಕರ್ಫ್ಯೂವನ್ನು ಜಾರಿಗೆ ತರಲು ತೀರ್ಮಾನಿಸಲಾಗಿತ್ತು.

"ಸರ್ಕಾರದ ಈ ತೀರ್ಮಾನದ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ರಾತ್ರಿ ಕರ್ಫ್ಯೂವಿನ ಅಗತ್ಯವಿಲ್ಲವೆಂಬಂತಹ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮರು ಪರಿಶೀಲಿಸಿ, ಸಂಪುಟ ಸಹೋದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ರಾತ್ರಿ ಕಫ್ರ್ಯೂವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ.

"ಸಾರ್ವಜನಿಕರು ಸ್ವಯಂ ನಿರ್ಭಂಧ ವಿಧಿಸಿಕೊಂಡು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಅನಗತ್ಯವಾಗಿ ಸಂಚರಿಸದಂತೆ ಹಾಗೂ ಸರ್ಕಾರ ವಿಧಿಸಿದ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಈ ವೈರಾಣುವಿನ ಹರಡುವಿಕೆ ತಡೆಯಲು ಕೋರಿದೆ."

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com