ಶಾಲೆಗಳ ಆರಂಭ ನಮಗೆ ಪ್ರತಿಷ್ಠೆ ವಿಷಯವಲ್ಲ: ಸಚಿವ ಸರೇಶ್ ಕುಮಾರ್

ಶಾಲೆಗಳ ಆರಂಭದ ವಿಷಯವನ್ನು ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮಾತ್ರ ಈ ನಿರ್ಧಾರ ಕೈಗೊಳ್ಳಲಾಗಿದೆ. ಅದೇ ರೀತಿ ನನ್ನ ಹಾಗೂ ಆರೋಗ್ಯ ಸಚಿವ ಸುಧಾಕರ್ ನಡುವೆ ಯಾವುದೇ ರೀತಿಯ ಸಮನ್ವಯತೆ ಕೊರತೆಯಿಲ್ಲ.
ಸಚಿವ ಸುರೇಶ್ ಕುಮಾರ್
ಸಚಿವ ಸುರೇಶ್ ಕುಮಾರ್

ಬೆಂಗಳೂರು: ಶಾಲೆಗಳ ಆರಂಭದ ವಿಷಯವನ್ನು ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮಾತ್ರ ಈ ನಿರ್ಧಾರ ಕೈಗೊಳ್ಳಲಾಗಿದೆ. ಅದೇ ರೀತಿ ನನ್ನ ಹಾಗೂ ಆರೋಗ್ಯ ಸಚಿವ ಸುಧಾಕರ್ ನಡುವೆ ಯಾವುದೇ ರೀತಿಯ ಸಮನ್ವಯತೆ ಕೊರತೆಯಿಲ್ಲ. ಪರಸ್ಪರ ಹೊಂದಾಣಿಕೆಯಿಂದ ಕೆಲಸ ಮಾಡುತ್ತಿದ್ದೇವೆ ಎಂದು ಪ್ರಾಥಮಿಕ ಹಾಗು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕೆಲ ಮಾಧ್ಯಮಗಳಲ್ಲಿ ಸುಧಾಕರ್ ಮತ್ತು ನನ್ನ ನಡುವೆ ಸಮನ್ವಯತೆ ಇಲ್ಲ. ಜಂಗೀಕುಸ್ತಿ ನಡೆಯುತ್ತಿದೆ ಎನ್ನುವ ಪದ ಬಳಕೆ ಮಾಡಿದ್ದಾರೆ. ಶಾಲೆಗಳನ್ನು ಆರಂಭಿಸುವ ವಿಚಾರದಲ್ಲಿ ಸುರೇಶ್ ಕುಮಾರ್ ಹಠ ಸಾಧಿಸುತ್ತಿದ್ದಾರೆ. ಮುಖ್ಯಮಂತ್ರಿಗಳಿಗೆ ಇಷ್ಟವಿಲ್ಲದಿದ್ದರೂ ಹಠ ಹಿಡಿದು ಶಾಲೆಗಳ ಆರಂಭಕ್ಕೆ ಸುರೇಶ್ ಕುಮಾರ್ ಮುಂದಾಗಿದ್ದಾರೆ ಎನ್ನುವ ವರದಿ ಮಾಡಲಾಗಿದೆ. ಆದರೆ ಇದು ಯಾವ ಆಧಾರದಲ್ಲಿ ಈ ರೀತಿ ಹಾಕುತ್ತಿದ್ದಾರೆ ಗೊತ್ತಿಲ್ಲ. ಇದೆಲ್ಲಾ ಸತ್ಯಕ್ಕೆ ದೂರವಾದ ವಿಚಾರ. ಶಾಲೆಗಳನ್ನು ಆರಂಭಿಸುವ ವಿಚಾರ ನಮ್ಮ ಸರ್ಕಾರಕ್ಕೆ ಪ್ರತಿಷ್ಠೆಯ ವಿಷಯವಲ್ಲ. ಇದು ಮಕ್ಕಳ ದೃಷ್ಟಿಯಿಂದ ಹಾಗೂ ಮಕ್ಕಳ ಭವಿಷ್ಯದ ಬದ್ಧತೆಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.

ನಾನೇನೂ ಬೆಂಗಳೂರಲ್ಲಿ ಕುಳಿತಿಲ್ಲ, ಗ್ರಾಮೀಣ ಪ್ರದೇಶದ ಬಗ್ಗೆಯೂ ನೋಡ್ತಿದ್ದೇವೆ. ಅಲ್ಲಿ ಮಕ್ಕಳು ಬಾಲ್ಯ ವಿವಾಹ ಸೇರಿದಂತೆ ಏನೆಲ್ಲ ಪರಿಣಾಮ ಆಗಿದೆ ಅಂತ ಗೊತ್ತಿದೆ. ಅದಕ್ಕಾಗಿ ನಾವು ಶಾಲೆ ಆರಂಭದ ಬಗ್ಗೆ ನಿರ್ಧಾರ ಮಾಡಿದ್ದೇವೆ. ನಾವಿಬ್ಬರೂ ಹೊಂದಾಣಿಕೆಯಿಂದ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ. ನನ್ನ ಮತ್ತು ಸಚಿವ ಸುಧಾಕರ್ ಸ್ನೇಹ ತುಂಬಾ ಚೆನ್ನಾಗಿದೆ. ನಾವು ಸರ್ಕಾರದಲ್ಲಿ ವೈಯಕ್ತಿಕ ಪ್ರತಿಷ್ಠೆಗೆ ಕೆಲಸ ಮಾಡುತ್ತಿಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com