ನಾಳೆ ಎರಡನೇ ಹಂತದ ಗ್ರಾಮ ಪಂಚಾಯತ್ ಚುನಾವಣೆ: ಮುಕ್ತ ಚುನಾವಣೆಗೆ ಸಕಲ ಸಿದ್ಧತೆ

39378 ಸ್ಥಾನಗಳಿಗೆ ನಾಳೆ  ಎರಡನೇ ಹಂತದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗಾಗಿ ಆಯೋಗ ಸಕಲ ಸಿದ್ಥತೆಗಳನ್ನು ಮಾಡಿಕೊಂಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: 39378 ಸ್ಥಾನಗಳಿಗೆ ನಾಳೆ  ಎರಡನೇ ಹಂತದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗಾಗಿ ಆಯೋಗ ಸಕಲ ಸಿದ್ಥತೆಗಳನ್ನು ಮಾಡಿಕೊಂಡಿದೆ.

ಮೇಲ್ನೋಟಕ್ಕೆ ರಾಜಕೀಯ ಪಕ್ಷಗಳ ಹಸ್ತಕ್ಷೇಪಕ್ಕೆ ಆಸ್ಪದವಿಲ್ಲದಂತೆ ಈ ಚುನಾವಣೆ ನಡೆಯುತ್ತಿದೆ ಎಂದು ರಾಜ್ಯ ಚುನಾವಣಾ ಆಯೋಗ ಹೇಳಿದೆ. ಆದರೆ ಎಲ್ಲಾ ಅಭ್ಯರ್ಥಿಗಳು ರಾಜಕೀಯ ಪಕ್ಷಗಳ ನಾಯಕರು,ಚಿಹ್ನೆಯ ಮೇಲೆ ಮತ ಯಾಚಿಸುತ್ತಿದ್ದಾರೆ. 
 
ರಾಜ್ಯದ ಎಲ್ಲಾ ಜಿಲ್ಲೆಗಳ 109 ತಾಲೂಕುಗಳ 2709  ಗ್ರಾಮ ಪಂಚಾಯತ್ ಗಳ ಒಟ್ಟು  39,378  ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಒಟ್ಟು 216 ಸ್ಥಾನಗಳಿಗೆ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ 3697  ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಂತಿಮವಾಗಿ 105431 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.
 
ರಾಜ್ಯದಲ್ಲಿ ಇದುವರೆಗೆ 38 ನೀತಿ ಸಂಹಿತೆ ಪ್ರಕರಣಗಳು ದಾಖಲಾಗಿವೆ. ಒಟ್ಟು 477 ಅಬಕಾರಿ ಕಾಯ್ದೆ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಬಹಿರಂಗ ಪ್ರಚಾರಕ್ಕೆ ನಿನ್ನೆ ಸಂಜೆ ತೆರೆ ಬಿದ್ದಿದ್ದು, ಇಂದು ಮತದಾರರ ಮನೆ ಬಾಗಿಲಿಗೆ ಹೋಗಿ ಮನ ಗೆಲ್ಲುವ ಪ್ರಯತ್ನ ನಡೆಸುತ್ತಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಪ್ರತಿ ಮತಗಟ್ಟೆಗೂ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ.

ಕೊರೋನಾ ಹಿನ್ನೆಲೆಯಲ್ಲಿ ಪ್ರತಿ ಮತಗಟ್ಟೆಯಲ್ಲೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರನ್ನು ನಿಯೋಜನೆ ಮಾಡಿ ಸ್ಯಾನಿಟೈಸರ್, ಥರ್ಮಲ್ ಸ್ಯ್ಕಾನಿಂಗ್ ವ್ಯವಸ್ಥೆ ಮಾಡಲಾಗಿದೆ. ಡಿಸೆಂಬರ್ 30 ರಂದು ಮತ ಎಣಿಕೆ ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com