ಸರ್ಕಾರಿ ಶಾಲಾ ಮಕ್ಕಳಿಗೆ ಸ್ಮಾರ್ಟ್ ತರಗತಿ ಆರಂಭಿಸಲು ಸರ್ಕಾರ ಚಿಂತನೆ: ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ 

ಕೊರೋನಾ ಆತಂಕದ ನಡುವೆ ಶಾಲೆಗಳು ಇನ್ನೂ ಮಕ್ಕಳಿಗೆ ಆರಂಭವಾಗದಿರುವ ಸಂದರ್ಭದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ.
ಕೆ ಎಸ್ ಈಶ್ವರಪ್ಪ
ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ಕೊರೋನಾ ಆತಂಕದ ನಡುವೆ ಶಾಲೆಗಳು ಇನ್ನೂ ಮಕ್ಕಳಿಗೆ ಆರಂಭವಾಗದಿರುವ ಸಂದರ್ಭದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ.

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿದ ಸ್ಮಾರ್ಟ್ ಕ್ಲಾಸ್ ಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ನಿನ್ನೆ ಶಿವಮೊಗ್ಗದಲ್ಲಿ ತಿಳಿಸಿದ್ದಾರೆ.

ಅವರು ನಿನ್ನೆ ಶಿವಮೊಗ್ಗ ನಗರದ ಪಾರ್ಕ್ ಬಡಾವಣೆಯ ಸರ್ಕಾರಿ ಆಂಗ್ಲ ಮತ್ತು ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಸ್ಮಾರ್ಟ್ ತರಗತಿಗಳನ್ನು ವೀಕ್ಷಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆಯಿಲ್ಲದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಮುಂದಿನ ಬಜೆಟ್ ನಲ್ಲಿ ಅನುದಾನ ಮೀಸಲಿಟ್ಟು ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಗಳನ್ನು ಆರಂಭಿಸಿ ಉತ್ತಮ ವಾತಾವರಣವನ್ನು ಮಕ್ಕಳಿಗೆ ನಿರ್ಮಿಸಿಕೊಡಲಾಗುವುದು, ಈ ಸಂಬಂಧ ರಾಜ್ಯ ಶಿಕ್ಷಣ ಸಚಿವರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com